ನಿಲ್ಲದ ದರ ಏರಿಕೆ: ಪ್ರಮುಖ ನಗರಗಳ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ?

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಸತತ ಆರನೇ ದಿನ ಮಂಗಳವಾರವು ಏರಿಕೆಯಾಗಿದ್ದು, ದರ ಪರಿಷ್ಕರಣೆ ನಂತರ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಪೈಸೆಗಳಲ್ಲಿ ಏರಿಕೆ ಕಂಡು ಬಂದಿದೆ.

ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ಗೆ 14 ಪೈಸೆ ಏರಿಕೆಯಾಗಿ 73.62 ರೂ.ಗಳಷ್ಟಿದ್ದರೆ, ಡೀಸೆಲ್‌ ಬೆಲೆಯಲ್ಲೂ 20 ಪೈಸೆಯಷ್ಟು ಏರಿಕೆಯಾಗಿ 68.07 ರೂ.ಗೆ ಮಾರಾಟವಾಗುತ್ತಿದೆ.

ನವದೆಹಲಿಯಲ್ಲಿ ಲೀಟರ್‌ ಪೆಟ್ರೋಲ್‌ಗೆ 13 ಪೈಸೆ ಏರಿಕೆಯಾಗುವ ಮೂಲಕ 71.27 ರೂ.ಗಳಷ್ಟಿದ್ದರೆ, ಡೀಸೆಲ್‌ 19 ಪೈಸೆ ಏರಿಕೆಯಾಗಿ 65.90 ರೂ.ಗಳಿಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಲೀ. ಪೆಟ್ರೋಲ್‌ 0.13 ಪೈಸೆ ಏರಿಕೆಯಾಗಿ 76.90 ರೂ.ಗೆ ಮಾರಾಟವಾಗುತ್ತಿದೆ. ಇನ್ನು ಡೀಸೆಲ್‌ ಲೀ.ಗೆ 20 ಪೈಸೆ ಜಾಸ್ತಿಯಾಗಿದ್ದು, 69.01 ರೂ.ಗಳಷ್ಟಿದೆ.

ಚೆನ್ನೈನಲ್ಲಿ ಪೆಟ್ರೋಲ್‌ ಲೀ.ಗೆ 14 ಪೈಸೆ ಜಾಸ್ತಿಯಾಗುವ ಮೂಲಕ 74.00 ರೂ.ಗಳಿದ್ದರೆ, ಲೀಟರ್‌ ಡೀಸೆಲ್‌ 69.63 ರೂ.ಗಳಿಗೆ ಮಾರಾಟವಾಗುವ ಮೂಲಕ 0.21 ಪೈಸೆ ಏರಿಕೆಯಾಗಿದೆ.

ಅದೇ ರೀತಿ ಕೋಲ್ಕತಾದಲ್ಲಿಯೂ 13 ಪೈಸೆ ಏರಿಕೆಯಾಗಿ 73.36 ರೂ.ಗೆ ಪೆಟ್ರೋಲ್‌ ಮಾರಾಟವಾಗುತ್ತಿದ್ದು, ಡೀಸೆಲ್‌ ಪ್ರತಿ ಲೀಟರ್‌ಗೆ 0.19 ಪೈಸೆ ಜಾಸ್ತಿಯಾಗಿ 67.68 ರೂ.ಗಳಷ್ಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆ ಮತ್ತು ಡಾಲರ್‌ ಎದುರಲ್ಲಿ ರೂಪಾಯಿ ಮೌಲ್ಯ ಕುಸಿತದ ಹಿನ್ನೆಲೆಯಲ್ಲಿ ಇಂಧನ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *