Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

12ನೇ ದಿನವೂ ಮುಂದುವರಿದ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

Sunday, 10.06.2018, 5:18 PM       No Comments

ನವದೆಹಲಿ: ಸತತವಾಗಿ ಬೆಲೆ ಏರಿಕೆ ಕಂಡಿದ್ದ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇದೀಗ 12ನೇ ದಿನವೂ ಬೆಲೆ ಇಳಿಕೆ ಮುಂದುವರಿದಿದೆ.

ಈ ಕುರಿತು ಇಂಡಿಯನ್‌ ಆಯಿಲ್‌ ವೆಬ್‌ಸೈಟ್‌ನಲ್ಲಿ ತಿಳಿಸಿದ್ದು, ದೆಹಲಿ ಮತ್ತು ಕೋಲ್ಕತಾದಲ್ಲಿ ಪೆಟ್ರೋಲ್‌ ಲೀಟರ್‌ಗೆ 24 ಪೈಸೆ ಮತ್ತು ಡೀಸೆಲ್‌ ಲೀಟರ್‌ಗೆ 18 ಪೈಸೆ ಕಡಿಮೆಯಾಗಿದೆ.

ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 23 ಪೈಸೆ ಮತ್ತು ಡೀಸೆಲ್‌ಗೆ 19 ಪೈಸೆ ಕಡಿಮೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್‌ಗೆ 26 ಪೈಸೆ ಮತ್ತು ಡೀಸೆಲ್‌ಗೆ 19 ಪೈಸೆ ಕಡಿಮೆಯಾಗಿದೆ.

ಪರಿಷ್ಕ್ರೃತ ದರವನ್ನು ಗಮನಿಸಿದರೆ ದೆಹಲಿಯಲ್ಲಿ ಲೀಟರ್‌ ಪೆಟ್ರೋಲ್‌ಗೆ 76.78, ಕೋಲ್ಕತಾ, ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 79.44, 84.61 and 79.69 ರೂ. ದರ ನಿಗದಿಯಾಗಿದೆ.

ಡೀಸೆಲ್‌ ದರ ಕೋಲ್ಕತಾದಲ್ಲಿ 70.65 ರೂ., ಮುಂಬೈನಲ್ಲಿ 72.51 ಮತ್ತು ಚೆನ್ನೈನಲ್ಲಿ 71.89 ರೂ.ಗಳಷ್ಟಿದೆ.

ಇನ್ನು ಬೆಂಗಳೂರಿನಲ್ಲಿ 24 ಪೈಸೆ ಇಳಿಕೆ ಕಂಡುಬಂದಿದ್ದು, ಲೀಟರ್‌ ಪೆಟ್ರೋಲ್‌ಗೆ 78.03 ರೂ. ಇತ್ತು. ಡೀಸೆಲ್‌ ಲೀಟರ್‌ಗೆ 18 ಪೈಸೆ ಇಳಿಕೆಯಾಗಿ 69.27 ರೂ. ಬೆಲೆ ನಿಗದಿಯಾಗಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top