

ಬೆಂಗಳೂರು: ಲೋಕಸಭಾ ಚುನಾವಣೆಯ ಬೆನ್ನಲ್ಲೇ ವಾಹನ ಸವಾರರಿಗೆ ರಾಜ್ಯ ಸರ್ಕಾರ ಬರೆ ನೀಡಿದೆ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಸೆಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂ., ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಏರಿಕೆಯು ಈ ಕ್ಷಣದಿಂದಲೇ ರಾಜ್ಯದಲ್ಲಿ ಜಾರಿಗೆ ಬಂದಿದೆ.
ಗ್ಯಾರಂಟಿ ಯೋಜನೆಗಳ ವೆಚ್ಚವನ್ನು ಸರಿದೂಗಿಸಲು ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳವನ್ನು ಮಾಡಿದೆ.
ಜೂನ್ 15ರಂದು ಬೆಳಗ್ಗೆ ಈ ಕುರಿತು ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ.
ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಆದರೂ ರಾಜ್ಯ ಸರ್ಕಾರಗಳು ವಿಧಿಸುವ ವ್ಯಾಟ್‌ನಿಂದ ರಾಜ್ಯಗಳಿಗೆ ಅನುಗುಣವಾಗಿ ಇಂಧನ ಬೆಲೆಗಳು ಬದಲಾಗುತ್ತವೆ.