ಚಿಕ್ಕಮಗಳೂರಿನಲ್ಲಿ ಪೆಟ್ರೋಲ್​ ಟ್ಯಾಂಕರ್​ ಪಲ್ಟಿ: ನಾಲ್ಕಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ

ಚಿಕ್ಕಮಗಳೂರು: ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಪೆಟ್ರೋಲ್​ ಟ್ಯಾಂಕರ್​ ಪಲ್ಟಿಯಾಗಿದ್ದು, ಟ್ಯಾಂಕರ್​ ಮತ್ತು ನಾಲ್ಕಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ತಗುಲಿದೆ. ಪೆಟ್ರೋಲ್​ ಟ್ಯಾಂಕರ್​ನ ಸುತ್ತಲೂ ಸುಮಾರು 100 ಮೀಟರ್​ವರೆಗೆ ಬೆಂಕಿ ಆವರಿಸಿದೆ.

ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಕಡೂರಿನಿಂದ ಹೊಸದುರ್ಗ ಕಡೆಗೆ ಲಾರಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯಲ್ಲಿ ಮನೆಯಲ್ಲಿದ್ದವರು ಹಾಗೂ ಟ್ಯಾಂಕರ್ ನಲ್ಲಿ ಇದ್ದವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *