More

    ಪ್ರವೀಣ ನೆಟ್ಟಾರು ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ

    ರಾಣೆಬೆನ್ನೂರ: ಪ್ರವೀಣ ನೆಟ್ಟಾರು ಕೊಲೆ ಪ್ರಕರಣ ಖಂಡಿಸಿ ಹಾಗೂ ಪಿಎಫ್‌ಐ, ಸಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಲು ಆಗ್ರಹಿಸಿ ಇಲ್ಲಿಯ ಹಿಂದುಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರಸಭೆ ಸದಸ್ಯ ಪ್ರಕಾಶ ಬುರಡಿಕಟ್ಟಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
    ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಹಳೇ ಪಿ.ಬಿ. ರಸ್ತೆ ಮೂಲಕ ಕುರುಬಗೇರಿ ಕ್ರಾಸ್, ದುರ್ಗಾ ವೃತ್ತ, ನೆಹರು ಮಾರುಕಟ್ಟೆ, ಪೋಸ್ಟ್ ವೃತ್ತ, ಕೋರ್ಟ್ ವೃತ್ತ ಸೇರಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ವೃತ್ತಕ್ಕೆ ಬಂದು ತಲುಪಿತು.
    ಅಲ್ಲಿ ಮಾನವ ಸರಪಳಿ ನಿರ್ಮಿಸಿದ ಹಿಂದು ಕಾರ್ಯಕರ್ತರು 3 ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ಬಂದ್ ಮಾಡಿ ಪ್ರತಿಭಟಿಸಿದರು. ಪಿಎಫ್‌ಐ, ಸಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ವಿರುದ್ಧ ಘೋಷಣೆ ಕೂಗಿದರು. ಮೂರು ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಸಂಘಟನೆಗಳ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರವೀಣ ನೆಟ್ಟಾರು ಕೊಲೆ ಆರೋಪಿಗಳನ್ನು ಎನ್‌ಕೌಂಟರ್ ಮಾಡಬೇಕು ಆಗ್ರಹಿಸಿದರು.
    ಬಂದ್‌ಗೆ ಉತ್ತಮ ಪ್ರತಿಕ್ರಿಯೆ…
    ಹಿಂದುಪರ ಸಂಘಟನೆಗಳ ಒಕ್ಕೂಟದಿಂದ ರಾಣೆಬೆನ್ನೂರ ಬಂದ್‌ಗೆ ಕರೆ ನೀಡಿದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರದ ಹಳೇ ಪಿ.ಬಿ. ರಸ್ತೆ, ನೆಹರು ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಎಂ.ಜಿ. ರಸ್ತೆ ವ್ಯಾಪಾರಸ್ಥರು ಬೆಳಗ್ಗೆಯಿಂದಲೇ ಅಂಗಡಿಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದರು. ಹೋಟೆಲ್, ಬೀದಿ ಬದಿ ವ್ಯಾಪಾರಸ್ಥರು, ಬೇಕರಿ, ಬಟ್ಟೆ ವ್ಯಾಪಾರಸ್ಥರು, ಖಾಸಗಿ ವಾಹನಗಳು, ಆಟೋರಿಕ್ಷಾ ಸೇರಿ ಎಲ್ಲರೂ ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts