More

    ಸಾಕಷ್ಟು ಮಾಹಿತಿ ಸಂಗ್ರಹಿಸಿಯೇ ಪಿಎಫ್ಐ ಮೇಲೆ ನಿಷೇಧ: ಸಿಎಂ ಬೊಮ್ಮಾಯಿ‌ ಹೇಳಿಕೆ

    ಬೆಂಗಳೂರು: ತಳಹಂತದ ಕಾರ್ಯಾಚರಣೆ, ಸಾಕಷ್ಟು ಮಾಹಿತಿ ಸಂಗ್ರಹಿಸಿ, ಎಲ್ಲ ರಾಜ್ಯಗಳಲ್ಲಿನ‌ ದಾವೆಗಳ ವಿವರ ಪಡೆದು, ಪೂರ್ವ ಸಿದ್ಧತೆ ಮಾಡಿಕೊಂಡ ನಂತರವೇ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.

    ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ದೇಶ ವಿರೋಧಿ ಚಟುವಟಿಕೆಗಳ ಜತೆಗೆ ಹಲವು ಗಲಭೆಗಳಲ್ಲಿ ಈ ಸಂಘಟನೆ ಚಿತಾವಣೆಯಿತ್ತು. ಎಲ್ಲ ಆಯಾಮಗಳನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ದಿಟ್ಡ ನಿರ್ಧಾರ ತೆಗೆದುಕೊಂಡಿದ್ದು, ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ ಎಂಬುದನ್ನು ಸಾರಿದ್ದಾರೆ ಎಂದರು.

    ಪಿಎಫ್ಐ ನಿಷೇಧಿಸುವಂತೆ ಕಾಂಗ್ರೆಸ್, ಸಿಪಿಎಂ ಸೇರಿ ಹಲವು ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಕಾನೂನು ಚೌಕಟ್ಟಿನಲ್ಲಿ ಸರ್ಕಾರ ಕ್ರಮವಹಿಸಿದ್ದು, ಇಂತಹ ವಿಚ್ಛಿದ್ರಕಾರಿ ಶಕ್ತಿಗಳ ಜತೆಗೆ ಜನರು ಕೈಜೋಡಿಸಬಾರದು ಎಂದು ಸಿಎಂ ಬೊಮ್ಮಾಯಿ‌ ಮನವಿ ಮಾಡಿದರು.

    ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಅಗತ್ಯ‌ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲೆಡೆ ಬಿಗಿ ನಿಗಾವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

    PFIಗೆ ಬಿಗ್​ ಶಾಕ್​ ಕೊಟ್ಟ ಕೇಂದ್ರ ಸರ್ಕಾರ: ಪಿಎಫ್​ಐ ಸೇರಿ 8 ಸಂಘಟನೆಗಳ ನಿಷೇಧ

    ದೇಶದಲ್ಲಿ PFI ಸಂಘಟನೆ ಬ್ಯಾನ್ ಆದ ಬೆನ್ನಲ್ಲೇ ಬೆಂಗಳೂರು ಸಿಟಿ ಪೊಲೀಸರು ಅಲರ್ಟ್: ಪ್ರತಿ ಏರಿಯಾದಲ್ಲೂ ಗಸ್ತು

    ಕಾಲಿವುಡ್​ ಸೂಪರ್​ ಸ್ಟಾರ್​ ವಿಶಾಲ್​ ಮನೆಯ ಮೇಲೆ ದುಷ್ಕರ್ಮಿಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts