More

    ಸುಳ್ಯ ಪಿಎಫ್‌ಐ ಕಚೇರಿಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಜತೆ ಸ್ಥಳ ಮಹಜರು

    ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ನಿನ್ನೆ ಇಬ್ಬರನ್ನು ಬಂಧಿಸಿದ್ದು , ಇಂದು ಅವರನ್ನು ಸುಳ್ಯ ಪಿಎಫ್‌ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದು, ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಕಚೇರಿಗೆ ಇಂದು ಬೆಳಿಗ್ಗೆ ಕರೆದುಕೊಂಡು ಹೋಗಿದ್ದಾರೆ.
    ನಿನ್ನೆ ಸುಳ್ಯ ತಾಲೂಕಿನ ನಾವೂರು ಗ್ರಾಮದ ಮಹಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಯಾಕೂಬ್ ಎಂಬವರ ಪುತ್ರ ಅಬೀದ್ (22) ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಯ ಗೌರಿಹೊಳೆ ಬಳಿಯ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಫಾಲ್ (28) ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳಿಬ್ಬರು ಹತ್ಯೆಯಾದ ಪ್ರವೀಣ್ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಹಾಗೂ ಹತ್ಯೆಯ ಯೋಜನೆ ರೂಪಿಸುತ್ತಿದ್ದ ತಂಡದ ಭಾಗವಾಗಿದ್ದರು. ಅವರನ್ನು ಇನ್ನಷ್ಟು ತನಿಖೆಗೆ ಒಳಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ಎಸ್ಪಿ ಋಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
    ಪಿಎಫ್‌ಐ ಸಂಘಟನೆಯ ಹೆಸರು ತಳುಕು

    ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಿಎಫೈ ಕಚೇರಿಯಲ್ಲಿ ಮಹಜರು ಪ್ರಕ್ರಿಯೆಗೆ ಒಳಪಡಿಸುತ್ತಿರುವ ಕ್ಷಣ ಕ್ಷಣದ ಮಾಹಿತಿಯನ್ನು ಎಡಿಜಿಪಿ ಅಲೋಕ್ ಕುಮಾರ್ ಪಡೆಯುತ್ತಿದ್ದಾರೆ. ಪಿಎಫ್‌ಐ ಕಚೇರಿ ಸುತ್ತ ಬಿಗಿ ಪೊಲೀಸ್ ಬಂದೋಬಸ್ತು ನಿಯೋಜಿಸಲಾಗಿತ್ತು. ಪ್ರವೀಣ್ ಹತ್ಯೆಯ ಮರು ದಿನದಿಂದಲೇ ಪ್ರಕರಣದ ಜತೆಗೆ ಪಿಎಫ್‌ಐ ಸಂಘಟನೆಯ ಹೆಸರು ತಳುಕು ಹಾಕಿಕೊಂಡಿತ್ತು. ಇವರೆಗೆ ಈ ಪ್ರಕರಣದಲ್ಲಿ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಆರು ಆರೋಪಿಗಳಿಗೆ ಪಿಎಫ್‌ಐ ಸಂಘಟನೆಯ ಜತೆಗಿನ ಸಂಫರ್ಕದ ಬಗ್ಗೆ ಜಿಲ್ಲಾ ಪೊಲೀಸರು ತುಟ್ಟಿ ಬಿಚ್ಚಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದಷ್ಟೆ ಹೇಳುತ್ತಿದ್ದರು.
    ಎನ್‌ಐಎಗೆ ತನಿಖಾ ಜವಾಬ್ದಾರಿ ವಹಿಸಲು ಕರ್ನಾಟಕ ನಿರ್ಧರ
    ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆಯ ಮಾಸ್ತಿ ಕಟ್ಟೆ ಎಂಬಲ್ಲಿ ಅಕ್ಷಯ ಪ್ರೆಶ್‌ಚಿಕನ್ ಫಾರ್ಮ್ ಎಂಬ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಜು 26 ರಂದು ರಾತ್ರಿ 8.30 ರ ಸುಮಾರಿಗೆ ಪ್ರವೀಣ್ ಅವರು ತನ್ನ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್‌ವೊಂದರಲ್ಲಿ ಮುಸುಕು ಧರಿಸಿಕೊಂಡು ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಮಾರಕಾಯುದ್ದಗಳಿಂದ ಅವರ ಮೇಲೆ ದಾಳಿ ಮಾಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಪುತ್ತೂರಿನ ಬೊಳ್ವಾರುನಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಲ್ಲಿ ಅವರು ಅಸುನೀಗಿದರು ಎಂದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಜು.29 ರಂದು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲು ಕರ್ನಾಟಕ ನಿರ್ಧರಿಸಿತ್ತು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts