ಬೆಂಗಳೂರು: 2025-26ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ) ಪ್ರವೇಶದ ಪಿಜಿಸಿಇಟಿ ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಎರಡೂ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ. ಶುಲ್ಕ ಪಾವತಿಗೆ ಮೇ 12 ಕೊನೇ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಪಿಜಿಸಿಇಟಿಯನ್ನು ಮೇ ಕೊನೇ ಅಥವಾ ಜೂನ್ ಮೊದಲ ವಾರದಲ್ಲಿ ನಡೆಸಲಾಗುತ್ತದೆ. ಡಿಸಿಇಟಿಯನ್ನು ಮೇ 31ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಪಿಜಿ- ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕೆ ಕೆಇಎ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ. ಬದಲಿಗೆ ಆರ್ಕಿಟೆಕ್ಚರ್ ಕೌನ್ಸಿಲ್ ನಡೆಸುವ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೇ ಇಲ್ಲಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಆದರೆ ಅವರು ಕೂಡ ಈಗ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.