More

    ಪಿ.ಜಿ.ಪಾಳ್ಯ ಗ್ರಾಪಂ ವ್ಯಾಪ್ತಿಯಲ್ಲಿ 131 ಕಾಮಗಾರಿ

    ಹನೂರು: ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ 131 ಕಾಮಗಾರಿಗಳು ನಡೆದಿದ್ದು, 32 ಲಕ್ಷ ರೂ. ಅನುದಾನ ಖರ್ಚು ಮಾಡಲಾಗಿದೆ ಎಂದು ತಾಲೂಕು ನರೇಗಾ ಯೋಜನೆಯ ಸಂಯೋಜಕ ಸಿದ್ದಪ್ಪಾಜಿ ತಿಳಿಸಿದರು.

    ಪಿ.ಜಿ.ಪಾಳ್ಯ ಗ್ರಾಪಂ ವತಿಯಿಂದ ಸೋಮವಾರ ಉಯಿಲನತ್ತ ಗ್ರಾಮದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ತಪಾಸಣೆ ಹಾಗೂ 15ನೇ ಹಣಕಾಸು ಯೋಜನೆಯ ಗ್ರಾಮಸಭೆಯಲ್ಲಿ ಮಾತನಾಡಿದರು.

    ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಲ್ಲಿ ಪ್ರತಿ ಕುಟುಂಬವೂ ಉದ್ಯೋಗ ಗಳಿಸಿ ಕೂಲಿ ಪಡೆಯಬಹುದಾಗಿದೆ. ಈ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ, ದನದ ಕೊಟ್ಟಿಗೆ, ಜಮೀನು ರಸ್ತೆ ಅಭಿವೃದ್ಧಿ ಸೇರಿದಂತೆ ಸಮುದಾಯದ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಆದ್ದರಿಂದ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು.

    ಈ ಯೋಜನೆಯಡಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಒಂದು ವರ್ಷದ ಅವಧಿಯಲ್ಲಿ ವಸತಿ ಯೋಜನೆಗೆ ಅನುದಾನ, ಪೌಷ್ಟಿಕ ಕೈ ತೋಟ, ಜಮೀನಿನಲ್ಲಿ ಬದು ನಿರ್ಮಾಣ, ಜಾನುವಾರುಗಳ ನೀರಿನ ತೊಟ್ಟಿ ನಿರ್ಮಾಣ, ಕಾಲುವೆ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 131 ಕಾಮಗಾರಿಗಳು ನಡೆದಿದ್ದು, ಕೂಲಿ ವೆಚ್ಚ 17,92,890 ರೂ. ಹಾಗೂ ಸಾಮಗ್ರಿ ವೆಚ್ಚ 14,37,326 ರೂ. ಸೇರಿದಂತೆ 32,30,216 ರೂ. ಅನುದಾನ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಇದೇ ವೇಳೆ ನರೇಗಾ ಯೋಜನೆಯಡಿ ಕೈಗೊಳ್ಳಲಾಗಿದ್ದ ಅಭಿವೃದ್ಧಿ ಕಾಮಗಾರಿಗಳ ವಿವರಗಳನ್ನು ಸಭೆಯಲ್ಲಿ ಮಂಡಿಸಲಾಯಿತು. ಜತೆಗೆ 15ನೇ ಹಣಕಾಸು ಯೋಜನೆಯಡಿ ಖರ್ಚಿನ ಬಗ್ಗೆ ಮಾಹಿತಿ ತಿಳಿಸಲಾಯಿತು.

    ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಸಂತೋಷ್‌ಕುಮಾರ್, ಉಪಾಧ್ಯಕ್ಷೆ ಸುಶೀಲಾ, ಸದಸ್ಯರಾದ ಕೃಷ್ಣಮೂರ್ತಿ, ಮಾದೇಶ್, ಮಾದೇವ, ಸುಧಾಬಾಯಿ, ನೋಡಲ್ ಅಧಿಕಾರಿ ಮುತ್ತುರಾಜು, ಪಿಡಿಒ ನಂಜುಂಡಸ್ವಾಮಿ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts