More

    ಪಿಜಿಸಿಇಟಿ: ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭ, ಪರೀಕ್ಷೆ ಯಾವಾಗ? ಇಲ್ಲಿದೆ ಮಾಹಿತಿ

    ಬೆಂಗಳೂರು 2024-25ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೇ 27ರಿಂದ ಜೂ.17ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶುಲ್ಕ ಪಾವತಿಸಲು ಜೂ.18 ಕೊನೆಯ ದಿನವಾಗಿದೆ.

    ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಪಿಜಿಸಿಇಟಿ ಪರೀಕ್ಷೆಯನ್ನು ಜು.13 ಮತ್ತು 14ರಂದು ಪ್ರವೇಶ ಪರೀಕ್ಷೆ (ಪಿಜಿಸಿಇಟಿ-24) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

    ಗೇಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿಸಿಇಟಿ-24 ಗೆ ಹಾಜರಾಗುವ ಅಗತ್ಯ ಇಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿಯೇ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ವಿವರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts