More

    ಪಿಜಿಸಿಇಟಿ: ಮಂಗಳೂರು ಕೇಂದ್ರ ಕ್ಯಾನ್ಸಲ್ ಮಾಡಿದ ಕೆಇಎ

    ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸರ್ವರ್ ಡೌನ್ ಆಗಿರುವುದರಿಂದ ಇಂಜಿನಿಯರಿಂಗ್ ಸೇರಿ ಇನ್ನಿತರ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಯಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರ ಇಲ್ಲದಿರುವುದಕ್ಕೆ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಮತ್ತು ರಾಷ್ಟ್ರ ಮಟ್ಟದ ಯಾವುದೇ ಪ್ರವೇಶ ಪರೀಕ್ಷೆಗಳು ನಡೆದರೂ ಮಂಗಳೂರು ಪ್ರಮುಖ ಪರೀಕ್ಷಾ ಕೇಂದ್ರವಾಗಿರುತ್ತದೆ. ಆದರೆ, ಈ ವರ್ಷ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಜಿಸಿಇಟಿ ಪರೀಕ್ಷೆಗೆ ಯಾವುದೇ ಪರೀಕ್ಷಾ ಕೇಂದ್ರ ನೀಡಿಲ್ಲ. ಹೀಗಾಗಿ ಅನಿವಾರ್ಯವಾಗಿ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಬೇಕಾಯಿತು ಎಂದು ಮಂಗಳೂರಿನ ಅಭ್ಯರ್ಥಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಉಡುಪಿ ಜಿಲ್ಲೆ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳ ಕೇಂದ್ರ ಭಾಗದಲ್ಲಿರುವುದರಿಂದ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಚ್ಚು ಅನುಕೂಲವಾಗಲಿದೆ. ಬಸ್ಸು ಮತ್ತು ರೈಲು ಸೇರಿ ಸಾರಿಗೆ ಸಂಪರ್ಕವೂ ಉತ್ತಮವಾಗಿದೆ ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ.

    See also  ಉಡುಪಿ ಜಿಲ್ಲಾ ಪಂಚಾಯಿತಿ ಮೀಸಲಾತಿ ಪ್ರಕಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts