21.7 C
Bengaluru
Tuesday, January 21, 2020

ಫಲ್ಗುಣಿಗೂ ತಟ್ಟಿದ ‘ಬಿಸಿ’

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಧನಂಜಯ ಗುರುಪುರ

ವಾಡಿಕೆಗಿಂತ ವಿಪರೀತ ಏರುತ್ತಿರುವ ಬಿಸಿಲು ಎಲ್ಲಡೆ ಜಲಮೂಲಗಳನ್ನು ಬರಿದಾಗಿಸುತ್ತಿದ್ದು, ಈ ‘ಬಿಸಿ‘ ಫಲ್ಗುಣಿ ನದಿಗೂ ತಟ್ಟಿದೆ.

ಫಲ್ಗುಣಿ ನದಿಯಲ್ಲಿ ಈ ಬಾರಿ ಹೊಸ ಸೇತುವೆಗಾಗಿ ನಿರ್ಮಿಸಿರುವ ಬಂಡು ರಸ್ತೆಯಿಂದಾಗಿ ಅಂತರ್ಜಲ ಕುಸಿತಕ್ಕೆ ಸ್ವಲ್ಪ ತಡೆಯಾಗಿದೆ. ಇದರಿಂದಾಗಿ ಗುರುಪುರ ಆಸುಪಾಸಿನಲ್ಲಿ ಇನ್ನು ಒಂದು ತಿಂಗಳು ಕುಡಿಯುವ ನೀರಿನ ಅಭಾವ ಉಂಟಾಗಲಾರದು ಎಂಬ ಲೆಕ್ಕಾಚಾರವಿದ್ದರೂ ನದಿ ನೀರು ಕ್ರಮೇಣ ಕಡಿಮೆಯಾಗುತ್ತಿದ್ದು, ವಿಪರೀತ ಬಿಸಿಲಿನಿಂದ ಈ ನೀರು ಕುಸಿಯುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಒಂದೊಮ್ಮೆ ಮಳೆ ವಿಳಂಬವಾದರೆ ಏಪ್ರಿಲ್ ಆರಂಭಕ್ಕೆ ಬಾವಿ, ಕೆರೆಕಟ್ಟೆ, ನದಿ ನೀರು ತಳ ಹಿಡಿದು, ಎಲ್ಲೆಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಬಹುದು.

ಅಡ್ಡೂರಿನಲ್ಲಿ ನೀರು ಶುದ್ಧೀಕರಣ ಘಟಕ: ಇತ್ತ ಗುರುಪುರ ಗ್ರಾಪಂ ಆಡಳಿತ ತನ್ನ ವ್ಯಾಪ್ತಿಯ ಚಿಲಿಂಬಿಗುಡ್ಡೆ, ಬಂಗ್ಲೆಗುಡ್ಡೆ, ಅಲೈಗುಡ್ಡೆ, ಕೊಟ್ಟಾರಿ ಗುಡ್ಡೆ ಸಹಿತ ಉಳಿದ ಪ್ರದೇಶಗಳ ನಿವಾಸಿಗರಿಗೆ ಕುಡಿಯುವ ನೀರು ಪೂರೈಕೆಗೆ ಸಾಧ್ಯವಿರುವ ಎಲ್ಲ ನೀರಿನ ಮೂಲಗಳ ಉಪಯೋಗಿಸಲು ಮುಂದಾಗಿದೆ. ಫಲ್ಗುಣಿ ನದಿಯಿಂದ ಕುಕ್ಕುದಕಟ್ಟೆಯಲ್ಲಿರುವ ಜಾಕ್ವೆಲ್ಲಿನಿಂದ ಗಂಜಿಮಠ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸಲಾಗುತ್ತಿದ್ದು, ದಾರಿಮಧ್ಯೆ ಈ ಪೈಪ್‌ಲೈನಿಂದ ಗುರುಪುರ ಗ್ರಾಪಂ ವ್ಯಾಪ್ತಿಯ ಬಂಗ್ಲೆಗುಡ್ಡೆ ನಿವಾಸಿಗರಿಗೆ ಕುಡಿಯುವ ನೀರು ಪೂರೈಸಲು ನೀರು ಪಡೆಯಲಾಗುತ್ತದೆ. ಗ್ರಾಮ ವ್ಯಾಪ್ತಿಯಲ್ಲಿ ಈಗ ಎರಡು ನೀರು ಶುದ್ಧೀಕರಣ ಘಟಕವಿದ್ದು, ಅಡ್ಡೂರಿನಲ್ಲಿ ಮತ್ತೊಂದು ನಿರ್ಮಾಣವಾಗಲಿದೆ ಎಂದು ಜಿಪಂ ಸದಸ್ಯ ಯು.ಪಿ.ಇಬ್ರಾಹಿಂ ತಿಳಿಸಿದ್ದಾರೆ.

ನೀರು ಪೂರೈಕೆ ಕಡಿತವಿಲ್ಲ: ಹಿಂದೆ ಏಪ್ರಿಲ್-ಮೇ ತಿಂಗಳ ಕೊನೇ 15-20 ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದರೂ ಪಂಚಾಯಿತಿ ಆಡಳಿತ ಸಮರ್ಥವಾಗಿ ನಿಭಾಯಿಸಿತ್ತು. ಹಲವು ಯೋಜನೆಗಳಲ್ಲಿ ಗ್ರಾಮಕ್ಕೆ ಬೋರ್‌ವೆಲ್ ಹಾಗೂ ನದಿ ನೀರಿನ ಸಂಪರ್ಕ ಗಳಿಸಲಾಗಿದೆ. ಸದ್ಯ ನೀರಿನ ಪೂರೈಕೆಯಲ್ಲಿ ಕಡಿತ ಮಾಡಿಲ್ಲ. ಗ್ರಾಮಕ್ಕೆ ಸರ್ಕಾರದ ಹೊಸ ಯೋಜನೆಗಳಿಂದ ಅನುದಾನ ಬಂದಿಲ್ಲ. ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನಕ್ಕಾಗಿ ಗ್ರಾಮಾಡಳಿತ ಸತತ ಪ್ರಯತ್ನ ಮುಂದುವರಿಸಿದ್ದು, ಜತೆಗೆ ಗ್ರಾಮದಲ್ಲಿ ಖಾಸಗಿ ಬಾವಿಗಳ ನೀರು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಗುರುಪುರ ಗ್ರಾಪಂ ಪಿಡಿಒ ಅಬೂಬಕ್ಕರ್ ತಿಳಿಸಿದ್ದಾರೆ.

ಸ್ಥಳೀಯರಲ್ಲಿ ಆತಂಕ: ಪರಿಸ್ಥಿತಿ ಹೀಗೆ ಮುಂದುವರಿದರೆ, ಏಪ್ರಿಲ್ ಮೊದಲ ವಾರದಲ್ಲೇ ಬಾವಿಗಳ ನೀರು ಬತ್ತಿ ಹೋಗಬಹುದು. ಬಳಿಕ ಕುಡಿಯುವ ನೀರಿಗಾಗಿ ಅಲೆದಾಡಬೇಕಾಗುತ್ತದೆ ಎಂದು ಗುರುಪುರದ ಮಹಿಳೆಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಈಗ ಅಷ್ಟಾಗಿ ನೀರಿನ ಸಮಸ್ಯೆ ಇಲ್ಲ. ಆದರೆ ಪರಿಸ್ಥಿತಿ ಹೀಗೆ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಳೆ ವಿಳಂಬವಾದರೆ ಕುಡಿಯುವ ನೀರಿನ ಅಭಾವ ತಲೆದೋರಬಹುದು ಎಂಬುದು ಗ್ರಾಪಂ ಸದಸ್ಯ ರಾಜೇಶ್ ಸುವರ್ಣ ಅವರ ಅಭಿಪ್ರಾಯ.

ಈ ಭಾಗದ 13 ಗ್ರಾಪಂಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 11 ಲಕ್ಷ ರೂ. ಬಿಡುಗಡೆಯಾಗಿದೆ. ಈಗಾಗಲೇ ಗುರುಪುರ ಗ್ರಾಪಂ ಹೊರತಾಗಿ ಉಳಿದ ಗ್ರಾಪಂಗಳಲ್ಲಿ ಹಣ ವಿನಿಯೋಗವಾಗಿದೆ. ಗುರುಪುರ ಗ್ರಾಪಂ ಕುಡಿಯುವ ನೀರಿನ ಯೋಜನೆಗೆ ಅನುದಾನ ಪಡೆಯಲು ಪ್ರಯತ್ನ ಮುಂದುವರಿಸಲಾಗಿದೆ. ಇಲ್ಲಿ ಕೆಲವು ಕಡೆಗಳಲ್ಲಿ ಬೋರ್‌ವೆಲ್ ಕೊರೆಯಲಾಗುವುದು.
| ಡಾ.ಭರತ್ ಶೆಟ್ಟಿ, ಶಾಸಕ

ಮುಂದೆ ಎದುರಾಗಬಹುದಾದ ನೀರಿನ ಸಮಸ್ಯೆ ನಿರ್ವಹಿಸಲು ಗ್ರಾಪಂ ಆಡಳಿತ ಬದ್ಧವಾಗಿದೆ. ನೀರಿನ ಅಭಾವ ಲಕ್ಷಣ ಕಂಡು ಬಂದಲ್ಲಿ ಮನೆಗಳಿಗೆ ಪೂರೈಕೆಯ ನೀರು ಕಡಿತ ಅಥವಾ ಎರಡು ದಿನಕ್ಕೊಂದು ಬಾರಿ ಪೂರೈಸಬೇಕಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಬಾರದು.
| ಜಿ.ಎಂ.ಉದಯ ಭಟ್, ಗುರುಪುರ ಗ್ರಾಪಂ ಉಪಾಧ್ಯಕ್ಷ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...