IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯ ಕೆಕೆಆರ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಇನ್ನು ಮಳೆ ಭೀತಿಯ ನಡುವೇ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಟಾಸ್ ಗೆದ್ದು ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಕೆಕೆಆರ್ ತಂಡ 20 ಓವರ್ಗೆ 8 ವಿಕೆಟ್ ನಷ್ಟಕ್ಕೆ 174 ರನ್ ಪೆರಿಸಿತ್ತು. 175 ರನ್ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ 16.2 ಓವರ್ನಲ್ಲಿಯೇ 3 ವಿಕೆಟ್ ನಷ್ಟಕ್ಕೆ 177 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬಿರಿತು.
ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ತಮ್ಮ ಅದ್ಭುತ ಆಟ ಪ್ರದರ್ಶಿಸಿದರು. ವಿರಾಟ್(36)59, ಫಿಲ್ ಸಾಲ್ಟ್ (31) 56 ಮತ್ತು ರಜತ್ ಪಟಿದಾರ್(16) 34 ರನ್ ಗಳಿಸುವ ಮೂಲಕ ಸುಲಭವಾಗಿ ತಂಡವನ್ನು ಗೆಲುವಿನ ದಡ ಸೇರಿಸಿದರು.