More

    ಭೀಕರ ರಸ್ತೆ ಅಪಘಾತಕ್ಕೆ ಗರ್ಭಿಣಿ ಸೇರಿ 7 ಜನರ ದಾರುಣ ಸಾವು

    ಕಲಬುರಗಿ: ನಗರದ ಹೊರವಲಯದಲ್ಲಿರುವ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಭೀಕರ ದುರಂತ ಸಂಭವಿಸಿದ್ದು, ಗರ್ಭಿಣಿ ಸೇರಿ 7 ಜನ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರಲ್ಲಿ ಗರ್ಭಿಣಿ ಸೇರಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರುಷರು. ಇವರೆಲ್ಲರೂ ಆಳಂದ ತಾಲೂಕಿನ ನಿವಾಸಿಗಳು.

    ಗರ್ಭಿಣಿಯನ್ನು ಹೆರಿಗೆಗಾಗಿ ಕಲಬುರಗಿಗೆ ಕರೆದುಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

    ಇದನ್ನೂ ಓದಿ: Web Exclusive: ಬಂಜರು ಭೂಮಿಗೆ ನ್ಯಾಯ ನೀಡಿದ ವಕೀಲ; ಬಂಗಾರದ ಬೆಳೆ ತೆಗೆದ ಸಾಧಕ

    ಕಲಬುರಗಿ ನಗರ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts