ಪಿಕಪ್ ಡಿಕ್ಕಿ, ನಾಲ್ವರಿಗೆ ಗಾಯ

Accident 3
Published on

ಕುಂದಾಪುರ: ಕಾರಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಟನೆ ಅರಾಟೆ ಸೇತುವೆ ಮೇಲೆ ಭಾನುವಾರ ಬೆಳಗಿನ ಜಾವ ನಡೆದಿದೆ. ಹೊಸಾಡು ಗ್ರಾಮದ ಜೀವನ್ ಎಂಬುವರು ಸತೀಶ ಮತ್ತು ನಾಗರಾಜ್ ಅವರೊಂದಿಗೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಬೈಂದೂರು ರಸ್ತೆಯಲ್ಲಿ ಮುಳ್ಳಿಕಟ್ಟೆ ಕಡೆಗೆ ಹೋಗುತ್ತಿರುವಾಗ ಅರಾಟೆ ಸೇತುವೆ ಮೇಲೆ ತ್ರಾಸಿ ಕಡೆಯಿಂದ ಮುಳ್ಳಿಕಟ್ಟೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬುಲೇರೋ ಪಿಕಪ್ ವಾಹನ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಸತೀಶ, ನಾಗರಾಜ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನೌಮನ್ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀವನ್ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net