ಹೆದ್ದಾರಿಯಲ್ಲಿ ಪಿಕಪ್ ಪಲ್ಟಿ

Published on

ಬಂಟ್ವಾಳ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ ಸರ್ಕಲ್ ಸಮೀಪ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಂಗಳೂರು ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನ ಬಿಸಿರೋಡಿನ ಸರ್ಕಲ್‌ನಿಂದ ಸ್ವಲ್ಪ ದೂರ ಸಾಗಿ ಚತುಷ್ಪತ ಕಾಂಕ್ರೀಟ್ ರಸ್ತೆಗೆ ಮಧ್ಯೆ ಹಾಕಲಾದ ಡಿವೈಡರ್ ಮೇಲೇರಿದೆ.ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net