ಪ್ರಧಾನಿ ನರೇಂದ್ರ ಮೋದಿ ಚಿತ್ರ ಬಿಡುಗಡೆಗೆ ತಡೆ ಕೋರಿ ರಾಜ್ಯ ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ಪಿಎಂ ನರೇಂದ್ರ ಮೋದಿ ಬಿಡುಗಡೆಗೆ ತಡೆ ಕೋರಿ ರಾಜ್ಯ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಕೀಲ ರಮೇಶ್​ ನಾಯ್ಕ್​ ಈ ಅರ್ಜಿಯನ್ನು ದಾಖಲಿಸಿದ್ದಾರೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾದರೆ ಮತದಾರರ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ, ಚುನಾವಣೆ ಮುಗಿಯುವವರೆಗೂ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.