22.8 C
Bengaluru
Saturday, January 18, 2020

ಮಹಿಳಾ ಭಕ್ತರಿಂದ ದತ್ತಪಾದುಕೆ ದರ್ಶನ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಚಿಕ್ಕಮಗಳೂರು: ರಾಜ್ಯದ ವಿವಿಧ ಭಾಗಗಳಿಂದ ದತ್ತ ಪೀಠಕ್ಕೆ ಮಂಗಳವಾರ ಆಗಮಿಸಿದ್ದ ಸಹಸ್ರಾರು ಮಹಿಳಾ ಭಕ್ತರು ಗುಹಾಂತರ ದೇವಾಲಯದಲ್ಲಿ ಪಾದುಕೆ ದರ್ಶನ ಪಡೆದರು.

ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ಅಂಗವಾಗಿ ನಗರದಲ್ಲಿ ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಸಹಸ್ರಾರು ಮಹಿಳೆಯರು ಕೈಮರಾ ಮಾರ್ಗವಾಗಿ ವಾಹನದಲ್ಲಿ ದತ್ತಪೀಠಕ್ಕೆ ಸಾಗಿ ಭಜನೆ ಮಾಡುತ್ತ ಗುಹಾಂತರ ದೇವಾಲಯದಲ್ಲಿ ಪಾದುಕೆ ದರ್ಶನ ಪಡೆದು ಅನಸೂಯಾ ದೇವಿ ಪೀಠದ ಬಳಿ ವಿಹಿಂಪ ಮಾತೃಶಕ್ತಿ ಪ್ರಮುಖ ಸುಧಾ ಎಸ್.ಪೈ ನೇತೃತ್ವದಲ್ಲಿ ನೀಡುತ್ತಿದ್ದ ಕುಂಕುಮ, ಅರಿಶಿಣ, ಬಳೆ ಸ್ವೀಕರಿಸಿ ಹೋಮ ಕುಂಡದ ಆವರಣಕ್ಕೆ ತೆರಳಿದರು.

ಅರ್ಚಕ ಚಂದ್ರಶೇಖರ್, ಬಿ.ಎಸ್.ಶ್ರೀಪಾದ, ಶೃಂಗೇಶ್ವರ ಭಟ್ ನೇತೃತ್ವದಲ್ಲಿ ಮಹಾಗಣ ಹೋಮ, ಸುಬ್ರಹ್ಮಣ್ಯ ಹೋಮ, ಸಾಥ್​ಪುಣ್ಯ ಹೋಮ, ನವಗ್ರಹ ಹೋಮ, ದುರ್ಗಾ ಹೋಮದ ನಂತರ ಪೂರ್ಣಾಹುತಿ ನೆರವೇರಿಸಲಾಯಿತು. ಮಹಿಳೆಯರು ಸಾಲಾಗಿ ಬಂದು ದತ್ತಾತ್ರೇಯ ಮೂರ್ತಿ ಮತ್ತು ಪೂರ್ಣಾಹುತಿ ನಡೆದ ಸ್ಥಳಕ್ಕೆ ಭಕ್ತಿ ಪೂರ್ವಕವಾಗಿ ನಮಸಿದರು. ಯುವತಿಯರ ಗುಂಪುಗಳು ದತ್ತಪೀಠ ನಮ್ಮದು ಎಂಬ ಘೊಷಣೆ ಕೂಗಿದರು.

ಸಚಿವ ಸಿ.ಟಿ.ರವಿ, ಪಲ್ಲವಿ ಸಿ.ಟಿ.ರವಿ ದತ್ತಾತ್ರೇಯನ ಮೂರ್ತಿ ಹಾಗೂ ಹೋಮಕುಂಡಕ್ಕೆ ನಮಸ್ಕರಿಸಿ ಭಕ್ತರೊಂದಿಗೆ ಭಜನೆಯಲ್ಲಿ ಪಾಲ್ಗೊಂಡಿದ್ದರು. ಮಂಗಳೂರು, ದಾವಣಗೆರೆ, ಸುಳ್ಯ, ಉಡುಪಿ, ಮೈಸೂರು, ತುಮಕೂರು, ತಿಪಟೂರು, ಚಿತ್ರದುರ್ಗ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರಾರು ಮಹಿಳೆಯರು ಭಾಗವಹಿಸಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...