More

  ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು

  ಆಲ್ದೂರು: ಮಹಾಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಪಾದಾಯಾತ್ರೆ ಮೂಲಕ ಜನ ಸಾಗರವೇ ಹರಿದು ಬರುತ್ತಿದೆ. ಒಂದು ವಾರದಿಂದ ಧರ್ಮಸ್ಥಳಕ್ಕೆ ಪಾದಾಯಾತ್ರೆ ಮೂಲಕ ಮಕ್ಕಳು, ಮಹಿಳೆಯರು, ವಯೋವೃದ್ಧರು ಗುಂಪು ಗುಂಪಾಗಿ ಸಾಗಿ ಬರುತ್ತಿದ್ದಾರೆ.

  ಚಿಕ್ಕಮಗಳೂರು-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಮುಖಾಂತರ ಚಾರ್ಮೂಡಿ ಮಾರ್ಗವಾಗಿ ಧರ್ಮಸ್ಥಳದತ್ತ ಹೆಜ್ಜೆ ಹಾಕುತ್ತಿದ್ದಾರೆ. ಹಾಸನ, ಬೇಲೂರು, ಸಕಲೇಶಪುರ ರಾಷ್ಟ್ರೀಯ ಹೆದ್ದಾರಿ ಮುಖಾಂತರ ಶಿರಾಡಿ ಘಾಟ್ ರಸ್ತೆಯ ಮೂಲಕ ಶ್ರೀ ಮಂಜುನಾಥನ ದರ್ಶನಕ್ಕೆ ಸಾಗುತ್ತಿದ್ದಾರೆ.
  ಕಳೆದ ಒಂದು ವಾರದಿಂದ ಪಾದಯಾತ್ರೆ ಆರಂಭವಾಗಿದ್ದು, ಮಹಾ ಶಿವರಾತ್ರಿ ಅಥವಾ ಹಬ್ಬದ ಹಿಂದಿನ ದಿನ ಧರ್ಮಸ್ಥಳಕ್ಕೆ ತಲುಪಲಿದ್ದಾರೆ. ರಸ್ತೆಗಳಲ್ಲಿ ಕಣ್ಣು ಹಾಯಿಸಿದ ಕಡೆಯಲ್ಲ ಭಕ್ತ ಸಾಗರವೇ ಕಂಡು ಬರುತ್ತಿದ್ದು, ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತರ ಕರ್ನಾಟಕ ಹಾಗೂ ಇತರೆ ಜಿಲ್ಲೆಯ ಹಳ್ಳಿಗಳಿಂದ ಟ್ರಾೃಕ್ಟರ್, ಲಾರಿ, ವ್ಯಾನ್‌ಗಳ ಮೂಲಕ ಭಕ್ತರು ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ.
  ಮಾರ್ಗ ಮಧ್ಯೆ ಶಾಮಿಯಾನ, ಟೆಂಟ್‌ಗಳನ್ನು ಹಾಕಿ ಭಕ್ತರನ್ನು ಆರೈಕೆ ಮಾಡಲಾಗುತ್ತಿದೆ. ಪ್ರಸಾದ, ಪಾನೀಯ, ಔಷಧಗಳನ್ನು ನೀಡಿ ಉಪಚರಿಸಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಪ್ರತಿದಿನ ಸಾವಿರಾರು ಪಾದಯಾತ್ರಿಗಳು ಈ ಮಾರ್ಗದಲ್ಲಿ ಸಾಗುತ್ತಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts