ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ: ಮಾಜಿ ಸಿಎಂ ಎಚ್​ಡಿಕೆ ವಿರೋಧ

ಬೆಂಗಳೂರು: ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರಿನ ವಿಷಯದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ ಬಿಜೆಪಿ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ ಎನ್ನುವುದು ಪದೇಪದೆ … Continue reading ದಕ್ಷಿಣ ಪಿನಾಕಿನಿ ನದಿ ನೀರು ಹಂಚಿಕೆ ನೆಪದಲ್ಲಿ ನ್ಯಾಯಾಧಿಕರಣ ರಚಿಸಲು ಕೇಂದ್ರ ಹುನ್ನಾರ: ಮಾಜಿ ಸಿಎಂ ಎಚ್​ಡಿಕೆ ವಿರೋಧ