ಬಸರಿಕಟ್ಟೆ- ಬಾಳೆಹೊಳೆ ರಸ್ತೆಯಲ್ಲಿ ಗಂಡಾಂತರ!

ಜಯಪುರ (ಕೊಪ್ಪ ತಾ.): ಪ್ರಸಿದ್ಧ ತೀರ್ಥಕ್ಷೇತ್ರಗಳಾದ ಶೃಂಗೇರಿ, ಹೊರನಾಡಿಗೆ ಸಂಪರ್ಕ ಕಲ್ಪಿಸುವ ಬಸರಿಕಟ್ಟೆ – ಬಾಳೆಹೊಳೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನಗಳ ಸವಾರರು ನಿತ್ಯ ಪರದಾಡುವ ಪರಿಸ್ಥಿತಿ ನಿರ್ವಣವಾಗಿದೆ.

ಬಸರೀಕಟ್ಟೆ ಹಾಗೂ ಬಾಳೆಹೊಳೆಯ ನಡುವಿನ ಸುಮಾರು ಏಳು ಕಿಲೋಮೀಟರ್ ರಸ್ತೆ ಸಂಪೂರ್ಣ ಹಾಳಾಗಿದೆ. ನೂರಾರು ಪ್ರವಾಸಿ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುವುದರಿಂದ ರಸ್ತೆ ಮೇಲೆ ಎದ್ದಿರುವ ಜಲ್ಲಿ ಕಲ್ಲುಗಳಿಂದ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ರಸ್ತೆಯಲ್ಲಿನ ಗುಂಡಿಗಳಿಂದ ಲಘು ವಾಹನ, ಕಾರುಗಳು ಹಾಳಾಗುತ್ತಿವೆ. ಬಸ್​ಗಳು ತಿರುವುಗಳಲ್ಲಿನ ಗುಂಡಿಗಳಲ್ಲಿ ಸಿಲುಕಿ ತಿರುವು ಪಡೆಯಲಾಗದೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ರಸ್ತೆ ದುರಸ್ತಿಪಡಿಸಿ ಹತ್ತಾರು ವರ್ಷಗಳೇ ಕಳೆದರೂ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ರಸ್ತೆ ದುರಸ್ತಿಗೆ ಮುಂದಾಗಿಲ್ಲ. ಶಾಸಕ ಎಂ.ಪಿ.ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳಿಗೆ ರಸ್ತೆ ದುರಸ್ತಿ ಪಡಿಸುವಂತೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಶೃಂಗೇರಿ-ಹೊರನಾಡು ಸಂರ್ಪಸುವ ಅತ್ಯಂತ ಹತ್ತಿರದ ರಸ್ತೆ ಇದಾಗಿರುವುದರಿಂದ ಇಲ್ಲಿಗೆ ಬರುವ ಪ್ರವಾಸಿ ವಾಹನಗಳು ನಿತ್ಯ ತೊಂದರೆ ಅನುಭವಿಸುತ್ತಿದ್ದು ಕೂಡಲೇ ರಸ್ತೆ ದುರಸ್ತಿ ಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಸ್ತೆ ಹಾಳಾಗಿರುವುದು ಗಮನಕ್ಕೆ ಬಂದಿದೆ. ರಾಜ್ಯ ಸರ್ಕಾರದಿಂದ ರಸ್ತೆ ಅಭಿವೃದ್ಧಿಗೆ 8.5 ಕೋಟಿ ರೂ. ಹಣ ಬಿಡುಗಡೆಯಾಗಿದೆ. 2 ಹಂತಗಳಲ್ಲಿ ಕಾಮಗಾರಿ ನಡೆಯಲಿದೆ. ಗುತ್ತಿಗೆದಾರರಿಗೆ ಕೂಡಲೇ ಕೆಲಸ ಪ್ರಾರಂಭಿಸುವಂತೆ ಶಾಸಕ ಎಂ.ಪಿ.ಕುಮಾರಸ್ವಾಮಿ ಆದೇಶಿಸಿದ್ದು, ಮುಂದಿನ ವಾರದಲ್ಲಿ ಕೆಲಸ ಪ್ರಾರಂಭಿಸಲಾಗುವುದು ಎಂಬುದು ಲೋಕೋಪಯೋಗಿ ಇಲಾಖೆ ಎಇಇ ಮಂಜುನಾಥ್ ಸ್ಪಷ್ಟನೆ.

ನಾಳೆ ಕಾಂಗ್ರೆಸ್ ಪ್ರತಿಭಟನೆ: ಬಸರೀಕಟ್ಟೆ-ಬಾಳೆಹೊಳೆ ರಸ್ತೆ ಅಭಿವೃದ್ಧಿಗೆ ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಣ ಬಿಡುಗಡೆಯಾಗಿ ಟೆಂಡರ್ ಪ್ರಕ್ರಿಯೆ ಮುಗಿದು ಅನೇಕ ತಿಂಗಳು ಕಳೆದರೂ ಕೆಲಸ ಪ್ರಾರಂಭವಾಗಿಲ್ಲ. ಕೆಲಸ ಪ್ರಾರಂಭಿಸುವಂತೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಳಾಗಿರುವ ರಸ್ತೆ ದುರಸ್ತಿಗೆ ಆಗ್ರಹಿಸಿ ಫೆ.21ರಂದು ಕಾಂಗ್ರೆಸ್, ಜೆಡಿಎಸ್ ನೇತೃತ್ವದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಕೊಪ್ಪ ತಾಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಸತೀಶ್ ತಿಳಿಸಿದ್ದಾರೆ.

Share This Article

A. P. J. Abdul Kalam ಅವರ ಈ ಟ್ರಿಕ್ಸ್​​ಗಳನ್ನು ವಿದ್ಯಾರ್ಥಿಗಳು ಓದುವಾಗ ಮಿಸ್​ ಮಾಡ್ದೆ ಅನುಸರಿಸಿ

ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಭಾರತದ ಮಹಾನ್ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್…

ಹೊಳೆಯುವ ಮುತ್ತಿನಂತಹ ಹಲ್ಲುಗಳಿಗೆ ಈ ಟಿಪ್ಸ್ ಫಾಲೋ ಮಾಡಿ..! Home Remedies

ಬೆಂಗಳೂರು: ಪ್ರತಿಯೊಬ್ಬರೂ ತಮ್ಮ ಹಲ್ಲುಗಳು ಮುತ್ತಿನಂತೆ ಬಿಳಿ ಮತ್ತು ಹೊಳೆಯುವಂತೆ ಕಾಣಬೇಕೆಂದು ಬಯಸುತ್ತಾರೆ. ಏಕೆಂದರೆ.. ನಮ್ಮ…

ಮೊದಲು ತಲೆಗೆ ನೀರು ಹಾಕ್ತೀರಾ? ಸ್ನಾನ ಮಾಡುವ ಸರಿಯಾದ ವಿಧಾನ ಯಾವುದು? ಇಲ್ಲಿದೆ ಉಪಯುಕ್ತ ಮಾಹಿತಿ | Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…