More

    ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

    ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

    ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಹೋಬಳಿ ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ಎಲ್ಲ ಇಲಾಖೆ ಕಟ್ಟಡ ನಿರ್ವಣಕ್ಕೆ, ಅಧಿಕಾರಿ, ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗಿದೆ. ಮಿನಿ ವಿಧಾನಸೌಧ ಕಟ್ಟಡ ನಿರ್ವಣಕ್ಕೆ ಅಜ್ಜಂಪುರದ ಅಮೃತ್​ವುಹಲ್ ಮತ್ತು ಗೌರಾಪುರದ ಗೋಮಾಳದ ಜಾಗವನ್ನು ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದಾರೆ. ಸೂಕ್ತ ಸ್ಥಳಕ್ಕೆ ಸರ್ಕಾರ ಅನುಮತಿ ನೀಡಿದ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

    ಅಜ್ಜಂಪುರ ಸೇರಿ ಹಲವು ಗ್ರಾಮಗಳಿಗೆ ಭದ್ರಾದಿಂದ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಅಗತ್ಯವಿರುವ ಓವರ್ ಹೆಡ್ ಟ್ಯಾಂಕ್ ನಿರ್ವಣಕ್ಕೆ ಅರಣ್ಯ ಇಲಾಖೆ ತಡೆಯೊಡ್ಡಿದೆ. ಇದನ್ನು ಶೀಘ್ರವೇ ಬಗೆಹರಿಸಲಾಗುವುದು. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ನೀರಿನ ಬವಣೆ ನೀಗಿಸಲಾಗುವುದು ಎಂದು ಭರವಸೆ ನೀಡಿದರು.

    ತಾಪಂ ಅಧ್ಯಕ್ಷೆ ಪದ್ಮಾವತಿ ಸಂಜೀವ್​ಕುಮಾರ್ ಮಾತನಾಡಿ, ರೈತರು ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿ ಸರ್ಕಾರ ವಿವಿಧ ಸೌಲಭ್ಯ ಕಲ್ಪಿಸಿದೆ. ಇವುಗಳನ್ನು ಸರಿಯಾದ ರೀತಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಸದಸ್ಯ ಕೃಷ್ಣಪ್ಪ ಮಾತನಾಡಿ, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ದೀರ್ಘಕಾಲ ಬಾಳಿಕೆಯ ಕಟ್ಟಡ ನಿರ್ವಿುಸಬೇಕು ಎಂದು ತಿಳಿಸಿದರು.

    ಜಿಪಂ ಸದಸ್ಯೆ ರೇಣುಕಮ್ಮ, ಗ್ರಾಪಂ ಉಪಾಧ್ಯಕ್ಷೆ ಸುನಂದಮ್ಮ, ಸದಸ್ಯ ಅತ್ತತ್ತಿ ಮಧುಸೂದನ್, ಪ್ರದೀಪ್​ಕುಮಾರ್, ಮುಖಂಡ ಜಿ.ನಟರಾಜ್, ತಿಪ್ಪೇಶಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚಿತ್ರಸೇನ, ಕೃಷಿ ಅಧಿಕಾರಿ ಅರುಣ್​ಕುಮಾರ್, ಎಇಇ ದಕ್ಷಿಣಮೂರ್ತಿ, ಕೆಆರ್​ಐಡಿಎಲ್​ನ ಡೆಲ್ವಿ, ಎ.ಇ.ಪುನೀತ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts