ವಿಮಾನ ದುರಂತ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು | Plane Crash

Plane Crash: ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆಯಲ್ಲಿ ಅಹಮದಾಬಾದ್​ನ ಜನರಲ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ:ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತು ಕೊಡಿ; ಶಿಕ್ಷಕರಿಗೆ ಡಿಡಿಪಿಐ ಸುರೇಶ ಹುಗ್ಗಿ ಕರೆ

ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ಮತ್ತಿತರರು ಶನಿವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ವಿಮಾನ ಪತನಗೊಂಡ ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

35-40 ಜನರ ಸ್ಥಿತಿ ಗಂಭೀರ

ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ವಿಮಾನ ದುರಂತದಲ್ಲಿ ಗಾಯಗೊಂಡಿರುವವರ ಪೈಕಿ ಕೆಲವರನ್ನು ಭೇಟಿ ಮಾಡಿದೆವು. ಉಳಿದವರು ತೀರಾ ಸುಟ್ಟ ಪರಿಸ್ಥಿತಿಯಲ್ಲಿರುವ ಕಾರಣ, ಸೂಕ್ಷ್ಮ ಪರಿಸ್ಥಿತಿಯಲ್ಲಿ ಅವರನ್ನು ಭೇಟಿ ಮಾಡುವುದು ಬೇಡ ಎಂಬ ಸಲಹೆಯಿಂದಾಗಿ ಭೇಟಿ ಮಾಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಗಾಯಾಳುಗಳ ಜತೆ ಮಾತನಾಡಿ ಆರೋಗ್ಯ ವಿಚಾರಿಸಿದರು” ಎಂದು ಮಾಹಿತಿ ನೀಡಿದರು.

ಗಾಯಾಳುಗಳ ಪರಿಸ್ಥಿತಿ ಹೇಗಿದೆ ಎಂದು ಕೇಳಿದಾಗ, “ನಾವು ಭೇಟಿ ಮಾಡಿದ ಕೆಲವರು ಚೇತರಿಕೆ ಹಂತದಲ್ಲಿದ್ದಾರೆ. ಸುಟ್ಟ ಗಾಯಾಳುಗಳ ಪೈಕಿ ಸುಮಾರು 35- 40 ಜನರ ಪರಿಸ್ಥಿತಿ ಗಂಭೀರವಾಗಿದೆ” ಎಂದು ಪರಿಸ್ಥಿತಿ ವಿವರಿಸಿದರು.

GOING DOWN… MAYDAY..MAYDAY.. ವಿಮಾನ ಪತನಕ್ಕೂ ಮುನ್ನ ಪೈಲಟ್​​ ಕಳುಹಿಸಿದ ಕೊನೆಯ ಸಂದೇಶ: ಏನಿದರ ಅರ್ಥ..?

ವಿಮಾನ ದುರಂತ; ಮೃತರ ಕುಟುಂಬಗಳಿಗೆ ತಕ್ಷಣಕ್ಕೆ ಹೆಚ್ಚುವರಿಯಾಗಿ 25 ಲಕ್ಷ ರೂ.ಬಿಡುಗಡೆ: ಏರ್​​ ಇಂಡಿಯಾ ಹೇಳಿಕೆ | Plane Crash

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…