ವಿಮಾನ ದುರಂತ ಹೃದಯ ವಿದ್ರಾವಕ

blank

ಸಾಗರ: ಅಹಮದಾಬಾದ್ ವಿಮಾನ ದುರಂತ ಹೃದಯ ವಿದ್ರಾವಕ ಘಟನೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದರು.
ಬ್ಲಾಕ್ ಕಾಂಗ್ರೆಸ್‌ನಿಂದ ಸಾಗರ ಹೋಟೆಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಭವಿಷ್ಯದ ಕನಸು ಕಟ್ಟಿಕೊಂಡು ವಿಮಾನ ಏರಿದ್ದ 241 ಜನರು ದುರಂತದಲ್ಲಿ ಮೃತಪಟ್ಟಿದ್ದು ಇಡೀ ದೇಶವೇ ದುಃಖಸಾಗರದಲ್ಲಿ ಮುಳುಗುವಂತೆ ಮಾಡಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷೆ ಎನ್.ಉಷಾ ಮಾತನಾಡಿ, ವಿಮಾನ ದುರಂತ ಅತ್ಯಂತ ದುರದೃಷ್ಟಕರ. ವಿಮಾನ ವೈದ್ಯ ವಿದ್ಯಾರ್ಥಿ ನಿಲಯದ ಮೇಲೆ ಬಿದ್ದು ಅನೇಕ ವಿದ್ಯಾರ್ಥಿಗಳು ಅಸುನೀಗಿದ್ದಾರೆ. ವೈದ್ಯರಾಗುವ ಕನಸು ಕಮರಿ ಹೋಗಿದೆ. ಇಂತಹ ಘಟನೆಗಳು ಮುಂದೆ ಆಗದಂತೆ ಎಚ್ಚರವಹಿಸಬೇಕಿದೆ ಎಂದರು.
ಐ.ಎನ್.ಸುರೇಶಬಾಬು, ಮಕ್ಬೂಲ್ ಅಹ್ಮದ್, ಸೈಯದ್ ಜಾಕೀರ್, ಮಂಡಗಳಲೆ ಗಣಪತಿ, ಮಧುಮಾಲತಿ, ಪ್ರಭಾವತಿ, ಸರಸ್ವತಿ ನಾಗರಾಜ್, ಎಲ್.ಚಂದ್ರಪ್ಪ, ಮಹಾಬಲ ಕೌತಿ, ಅನ್ವರ್ ಬಾಷಾ, ವಿಲ್ಸನ್ ಗೋನ್ಸಾಲ್ವಿಸ್, ರಮೇಶ್, ಸೋಮಶೇಖರ, ಕಬೀರ್, ಬೀರೇಶ್ ಇತರರಿದ್ದರು.

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…