More

    ಯೋಜನೆ ಅನುಷ್ಠಾನಕ್ಕೆ ಕ್ರಮ

    ಚಿಕ್ಕೋಡಿ: ನೀರಾವರಿ ಸಚಿವರಾದ ಬಳಿಕ ಮಹಾಲಕ್ಷ್ಮೀ ಏತ ನೀರಾವರಿಗೆ ಪ್ರಥಮ ಆದ್ಯತೆ ನೀಡಿದ್ದೇನೆ. ಜಿಲ್ಲೆಯ ನೀರಾವರಿ ಯೋಜನೆ ಕಾಮಗಾರಿಗಳನ್ನೂ ಶೀಘ್ರ ಆರಂಭಿಸಲು ನಿರ್ಧರಿಸಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

    ತಾಲೂಕಿನ 17 ಗ್ರಾಮಗಳ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮಹಾಲಕ್ಷ್ಮೀ ಏತ ನೀರಾವರಿ ಯೋಜನಾ ಸ್ಥಳ ವೀಕ್ಷಣೆ ಬಳಿಕ ಕುಠಾಳಿ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿ, ರೈತರಿಗೆ ನೀರು ಮುಖ್ಯ. ಅವರಿಗೆ ನೆರವಾಗುವ ಉದ್ದೇಶದಿಂದಲೇ ನಾನು ನೀರಾವರಿ ಖಾತೆ ಪಡೆದಿರುವೆ ಎಂದು ತಿಳಿಸಿದರು.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ನೀರಾವರಿ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಇದರಿಂದ ಅಭಿವೃದ್ಧಿಗೆ ಯಾವುದೇ ರೀತಿಯ ಅನು
    ದಾನದ ಕೊರತೆಯಾಗುವುದಿಲ್ಲ. ಶೀಘ್ರ ಮಹಾರಾಷ್ಟ್ರದ ನೀರಾವರಿ ಸಚಿವರ ಜತೆ ಮಾತುಕತೆ ನಡೆಸಿ ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ಶಾಶ್ವತ ಒಪ್ಪಂದ ಮಾಡಿ ಕೊಳ್ಳಲು ಕ್ರಮ ವಹಿಸಲಾಗುವುದು. ಮೂರು ವರ್ಷದಲ್ಲಿ ಮಹಾಲಕ್ಷ್ಮೀ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

    ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಕೃಷ್ಣಾ ನದಿಯ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗುತ್ತಿದೆ. ಆದ್ದರಿಂದ ಶೀಘ್ರ ಮಹಾಲಕ್ಷ್ಮೀ ಏತನೀರಾವರಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು. ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಜಿಪಂ ಅಧ್ಯಕ್ಷ ಆಶಾ ಐಹೊಳೆ, ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ ನೆರ್ಲಿ, ಮಹೇಶ ಭಾತೆ ಇತರರಿದ್ದರು.

    ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸವದಿ ಜತೆಗಿಲ್ಲ

    ನಿಪ್ಪಾಣಿ: ಡಿಸಿಸಿ ಬ್ಯಾಂಕ್ ಚುನಾವಣೆ ವಿಷಯದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಜತೆ ಹೋಗುವ ಪ್ರಶ್ನೆಯಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಚಿಕ್ಕೋಡಿ ತಾಲೂಕಿನ ಕಲ್ಲೋಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಪರಿಶೀಲಿಸಿದ ಬಳಿಕ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಚಿಕ್ಕೋಡಿ, ನಿಪ್ಪಾಣಿ ಸೇರಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿನ ಎಲ್ಲ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇಲಾಖೆಗೆ ನಿರ್ದೇಶಿಸಿದ್ದೇನೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿಯ ಬ್ರಿಡ್ಜ್ ಕಂ ಬ್ಯಾರೇಜ್ ಬಹಳ ಹಳೆಯದಾಗಿದ್ದು, ಅದನ್ನೂ ಹೊಸದಾಗಿ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts