More

    ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ

    ಚಿಕ್ಕೋಡಿ: ಬಿಜೆಪಿ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸಮಾಜದ ಕಟ್ಟ ಕಡೆಯ ಮಹಿಳೆಗೂ ಈ ಯೋಜನೆ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಪಟ್ಟಣದ ಇಂದಿರಾ ನಗರದ ಪಕ್ಷದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ಸಭೆ ಹಾಗೂ ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳಿಗೆ ರಶೀದಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರು ಪಕ್ಷ ನೀಡಿರುವ ಜವಾಬ್ದಾರಿಯನ್ನು ಬಳಸಿಕೊಂಡು ಪಕ್ಷ ಸಂಘಟನೆಯೊಂದಿಗೆ ಮಹಿಳಾ ಕಲ್ಯಾಣಕ್ಕೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

    ಚಿಕ್ಕೋಡಿ ಜಿಲ್ಲೆ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವಥಪುರ ಮಾತನಾಡಿ, ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆ ಆರಂಭಿಸಿದೆ. ಇದು ಹೆಣ್ಣು ಮಕ್ಕಳ ಹೆಸರಲ್ಲಿ ಸಣ್ಣ ಉಳಿತಾಯ ಮಾಡಲು ಉಪಯುಕ್ತ ಯೋಜನೆಯಾಗಿದೆ. ಈ ಯೋಜನೆಯಡಿ ಖಾತೆಯ ವಂತಿಕೆದಾರರು ಅಂಚೆ ಇಲಾಖೆಯಲ್ಲಿ ವರ್ಷಕ್ಕೆ 250 ರೂ. ಪಾವತಿಸುವ ಮೂಲಕ ಖಾತೆ ಚಾಲ್ತಿಯಲ್ಲಿಡಬಹುದು. ಕೆಲ ವರ್ಷಗಳ ನಂತರ ಮಹಿಳೆಯರು ಈ ಹಣದ ಲಾಭ ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದರು. ಚಿಕ್ಕೋಡಿ ಜಿಲ್ಲೆಯಲ್ಲಿ ಬಡ ಹೆಣ್ಣು ಮಕ್ಕಳನ್ನು ಗುರುತಿಸಿ, ಅವರ ಹೆಸರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಡಿ 100 ಖಾತೆ ತೆರೆಯಲು ಮಹಿಳಾ ಮೋರ್ಚಾಗಳಿಗೆ ಗುರಿ ನೀಡಲಾಗಿದೆ. ಚಿಕ್ಕೋಡಿ ಜಿಲ್ಲಾ ಘಟಕ 134 ಖಾತೆ ತೆರೆಯುವ ಮೂಲಕ ಗುರಿ ಮೀರಿ ಸಾಧನೆ ಮಾಡಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಖಾತೆಗಳನ್ನು ತೆರೆಯುವ ಚಿಂತನೆ ಹೊಂದಲಾಗಿದೆ ಎಂದು ತಿಳಿಸಿದರು.

    ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಶ ನೇರ್ಲಿ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ರಮೇಶ ಖೇತಗೌಡರ, ಮಹಿಳಾ ಮೋರ್ಚಾ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts