16 C
Bangalore
Saturday, December 7, 2019

ನೀರು ಹಿಡಿಯಲೊಂದು ಯೋಜನೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹುಬ್ಬಳ್ಳಿ: ಮಳೆ ನೀರು ವ್ಯರ್ಥವಾಗದಂತೆ ತಡೆಯಲು ಮಹಾನಗರ ಪಾಲಿಕೆ ಕಚೇರಿ ಕಟ್ಟಡಗಳಿಗೆ ಮಳೆ ನೀರು ಕೊಯ್ಲು (ರೇನ್ ವಾಟರ್ ಹಾರ್ವೆಸ್ಟ್) ಘಟಕ ಅಳವಡಿಸಲು ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್​ಸಿಟಿ ವತಿಯಿಂದ ಯೋಜನೆಯೊಂದನ್ನು ಜಾರಿಗೊಳಿಸಲಾಗುತ್ತಿದೆ.

ಮಹಾನಗರ ಪಾಲಿಕೆ ಮುಖ್ಯ ಕಚೇರಿ, ಚಿಟಗುಪ್ಪಿ ಆಸ್ಪತ್ರೆ ಹಾಗೂ ಲ್ಯಾಮಿಂಗ್ಟನ್ ಶಾಲೆಯ ಆವರಣದಲ್ಲಿ ಒಟ್ಟು 37 ಲಕ್ಷ ರೂ. ವೆಚ್ಚದಲ್ಲಿ ಮಳೆ ನೀರು ಕೊಯ್ಲು ಘಟಕ ಅಳವಡಿಸುವ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದೆ.

ವಾಣಿಜ್ಯ ಸಂಕೀರ್ಣ ಹಾಗೂ ಅಪಾರ್ಟಮೆಂಟ್​ಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಘಟಕ ಅಳವಡಿಸಬೇಕೆಂಬ ನಿಮಯ ಜಾರಿಗೆ ತಂದಿರುವ ಪಾಲಿಕೆ, ಇದನ್ನು ಅಳವಡಿಸದಿದ್ದರೆ ಮುಕ್ತಾಯ ಪ್ರಮಾಣಪತ್ರ ನೀಡುವುದಿಲ್ಲವೆಂಬ ಎಚ್ಚರಿಕೆಯನ್ನೂ ನೀಡಿದೆ. ಈ ಎಚ್ಚರಿಕೆ ನೀಡಿದ ಕೆಲವೇ ತಿಂಗಳಲ್ಲಿ ತನ್ನ ಕಟ್ಟಡಗಳಿಗೂ ಸ್ಮಾರ್ಟ್​ಸಿಟಿ ಯೋಜನೆಯ ಸಹಾಯದಿಂದ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಲು ಪಾಲಿಕೆ ಮುಂದಾಗಿದೆ.

ಪಾಲಿಕೆ ಆಯುಕ್ತರ ಕಚೇರಿ ಹಿಂಭಾಗದಡಿ 4 ಪ್ರತ್ಯೇಕ ಮಳೆ ನೀರು ಕೊಯ್ಲು ಘಟಕ ಅಳವಡಿಸಲಾಗುತ್ತಿದೆ. 60 ಮೀ., 43 ಮೀ., 25 ಮೀ. ಹಾಗೂ 15 ಮೀ. ಉದ್ದದ ಪ್ರತ್ಯೇಕ ತಗ್ಗುಗಳನ್ನು ತೋಡಲಾಗಿದೆ. ಇದರಲ್ಲಿ ಮಳೆ ನೀರು ಸಂಗ್ರಹಕ್ಕೆ ಬೇಕಾದ ಮರುಪೂರಣ ಸಾಮಗ್ರಿಗಳನ್ನು ಅಳವಡಿಸಲಾಗುತ್ತಿದೆ. ಇದರೊಂದಿಗೆ ಆಯುಕ್ತರ ಕಚೇರಿ ಎದುರು 21 ಮೀ. ಉದ್ದದ ತಗ್ಗು ತೋಡಿದ್ದು, ಕಾಮಗಾರಿ ನಡೆಯುತ್ತಿದೆ.

ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿನ ಉದ್ಯಾನವನದ ಎಡಭಾಗದಲ್ಲಿ 81 ಮೀ. ಹಾಗೂ ಮುಂಭಾಗದಲ್ಲಿ 33 ಮೀ. ಉದ್ದದ ಮಳೆ ಕೊಯ್ಲು ಘಟಕ ನಿರ್ವಿುಸಲಾಗುತ್ತಿದೆ. ಚಿಟಗುಪ್ಪಿ ಆಸ್ಪತ್ರೆ ಮುಂಭಾಗದಲ್ಲಿ 30 ಮೀ. ಉದ್ದದ ಹಾಗೂ ಲ್ಯಾಮಿಂಗ್ಟನ್ ಶಾಲೆ ಆವರಣದಲ್ಲಿ 102 ಮೀ. ಉದ್ದದ ತಗ್ಗು ತೋಡಿದ್ದು, ಕೆಲಸ ಚುರುಕಿನಿಂದ ನಡೆದಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಮುಕ್ತಾಯವಾಗುವ ನಿರೀಕ್ಷೆ ಇದೆ.

ಇಲ್ಲಿ ಬೀಳುವ ಮಳೆ ನೀರು ವ್ಯರ್ಥವಾಗಿ ಹರಿದುಹೋಗದೆ ಅಲ್ಲೇ ಇಂಗಿ ಅಂತರ್ಜಲ ಹೆಚ್ಚಳವಾಗಲಿದೆ. ಇದರೊಂದಿಗೆ ಇಲ್ಲಿನ ಉದ್ಯಾನವನಗಳಲ್ಲಿನ ಗಿಡ, ಮರಗಳಿಗೆ ಪ್ರತ್ಯೇಕವಾಗಿ ನೀರು ಹಾಕುವ ಕೆಲಸವೂ ತಪ್ಪಲಿದೆ.

ಮಳೆ ನೀರು ಕೊಯ್ಲು ಘಟಕ ನಿರ್ವಣದಿಂದ ಅಂತರ್ಜಲ ಹೆಚ್ಚಲಿದೆ. ಇಲ್ಲಿನ ಉದ್ಯಾನವನಗಳಲ್ಲಿನ ಗಿಡ, ಮರಗಳು ಸದಾ ಹಸರಿನಿಂದ ಕಂಗೊಳಿಸುತ್ತವೆ. ಬೇಸಿಗೆಯಲ್ಲಿ ನೀರಿನ ಬವಣೆ ನೀಗಲಿದೆ.

ಎಸ್.ಎಚ್. ನರೇಗಲ್, ವಿಶೇಷ ಅಧಿಕಾರಿ, ಹು-ಧಾ ಸ್ಮಾರ್ಟ್ ಕಂಪನಿ

ಈ ತಿಂಗಳೊಳಗಾಗಿ ಮಳೆ ನೀರು ಕೊಯ್ಲು ಘಟಕಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಸ್ಮಾರ್ಟ್​ಸಿಟಿ ಯೋಜನೆಯಡಿ ಈ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಇದು ಸದ್ಯಕ್ಕೆ ಪಾಲಿಕೆಯ ಹುಬ್ಬಳ್ಳಿ ಕಚೇರಿಗಳಿಗೆ ಮಾತ್ರ ಸೀಮಿತವಾಗಿದೆ.

ಶಕೀಲ್ ಅಹ್ಮದ್, ಆಯುಕ್ತರು, ಹು-ಧಾ ಮಹಾನಗರ ಪಾಲಿಕೆ 

 

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...