ಪಂಜ ದೇವಳದ ವಠಾರದಲ್ಲಿ ಗಿಡ ನಾಟಿ

Sub_Sasi
Published on

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪಂಜ ವಲಯದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಗಿಡ ನಾಟಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಪಂಜ ವಿಪತ್ತು ಘಟಕ ಹಾಗೂ ಕೂತ್ಕುಂಜ ಒಕ್ಕೂಟದಿಂದ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಗೆ ಗಿಡ ನೀಡಿ ಚಾಲನೆ ನೀಡಲಾಯಿತು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪವಿತ್ರಾ, ತಾಲ್ಲೂಕು ಜನಜಾಗೃತಿ ವೇದಿಕೆ ಸದಸ್ಯ ಮೋನಪ್ಪ ಗೌಡ ಬೊಳ್ಳಾಜೆ, ಒಕ್ಕೂಟದ ಅಧ್ಯಕ್ಷೆ ನಳಿನಿ, ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ತಾಲೂಕು ಕೃಷಿ ಅಧಿಕಾರಿ ರಮೇಶ್, ಘಟಕ ಪ್ರತಿನಿಧಿ ವಿಶ್ವನಾಥ ಸಂಪ, ಸೇವಾಪ್ರತಿನಿಧಿ ಕವಿತಾ, ಮೇಲ್ವಿಚಾರಕಿ ಕಲಾವತಿ, ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಒಕ್ಕೂಟ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net