ಖಾಲಿ ಇರುವ ಸ್ಥಳದಲ್ಲಿ ಗಿಡ ನಾಟಿ: ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಆಶಯ

gida
ವಿದ್ಯಾರ್ಥಿಗಳಿಗೆ ವಲಯಾರಣ್ಯಾಧಿಕಾರಿ ವಿಮಲ್ ಬಾಬು ಗಿಡಗಳನ್ನು ವಿತರಿಸಿದರು.
Published on

ಸುಬ್ರಹ್ಮಣ್ಯ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಬುಧವಾರ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯವರು ಉಚಿತವಾಗಿ ಕೊಟ್ಟ ಗಿಡಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ನಾವು ಗಿಡಗಳನ್ನು ನೆಟ್ಟು ಬೆಳೆಸೋಣ ಹಾಗೂ ಪೋಷಿಸೋಣ. ಅದರಿಂದ ದೊರೆಯುವ ಶುದ್ಧ ಆಮ್ಲಜನಕವನ್ನು ಸೇವಿಸುವುದರೊಂದಿಗೆ ನಮ್ಮ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳೋಣ. ಶುದ್ಧವಾದ ಗಾಳಿಯಿಂದಾಗಿ ಶುದ್ಧವಾದ ನೀರೂ ದೊರಕುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಪರಿಸರ ಹಾಗೂ ಖಾಲಿ ಉಳಿದಿರುವ ಸ್ಥಳದಲ್ಲಿ ಗಿಡಗಳನ್ನ ನೆಡಲು ಮುಂದಾಗೋಣ ಎಂದು ಹೇಳಿದರು.

ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್, ಸೀನಿಯರ್ ಚೇಂಬರ್ ಅಧ್ಯಕ್ಷ ಡಾ.ರವಿ ಕಕ್ಕೆಪದವು, ರೋಟರಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಪೂರ್ವ ಅಧ್ಯಕ್ಷ ಗೋಪಾಲ್ ಎಣ್ಣೆಮಜಲು, ಉಪವಲಯ ಅರಣ್ಯ ಅಧಿಕಾರಿ ಮನೋಜ್, ಅರಣ್ಯ ರಕ್ಷಕ ಬಸಪ್ಪ, ಮುಖ್ಯಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಕೀರ್ತನ ಹೆಬ್ಬಾರ್, ಶಿಕ್ಷಕ ವೃಂದ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net