ಹಸಿರೀಕರಣ ಸೀಮಿತವಾಗದಿರಲಿ

ಮೈಸೂರು: ಗಿಡ ನೆಡುವ ಕಾರ್ಯಕ್ರಮ ಪರಿಸರ ದಿನಕ್ಕೆ ಮಾತ್ರ ಸೀಮಿತವಾಗದೆ ವರ್ಷಪೂರ್ತಿ ನಡೆಯಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ತಿಳಿಸಿದರು.

ವಿಶ್ವ ಪರಿಸರ ದಿನದ ಪ್ರಯುಕ್ತ ವಿಶ್ವ ಮಾನವ ಮೈಸೂರು ವಿವಿ ನೌಕರರ ವೇದಿಕೆ ವತಿಯಿಂದ ಸಂಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಶ್ವ ಪರಿಸರ ದಿನವನ್ನು ಗಿಡನೆಟ್ಟು ನೀರುಣಿಸುವ ಮೂಲಕ ಆಚರಿಸುತ್ತಿದ್ದೇವೆ. ಗಿಡಮರಗಳಿಲ್ಲದೆ ಮಾಲಿನ್ಯ ಹೆಚ್ಚುತ್ತಿದೆ. ಮಾಲಿನ್ಯ ನಿಯಂತ್ರಣಕ್ಕೆ ನಾವು ಹಸಿರೀಕರಣ ಮಾಡಬೇಕು. ಈ ಹಸಿರೀಕರಣ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದರು.

ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ, ಪೊಲೀಸ್ ತರಬೇತಿ ಶಾಲೆಯ ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಪರೀಕ್ಷಾಂಗ ಕುಲಸಚಿವ ಕೆ.ಎಂ. ಮಹದೇವನ್, ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಪ್ರಾಂಶುಪಾಲರಾದ ಪ್ರೊ.ಸಿ.ಪಿ. ಸುನೀತಾ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *