More

    ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯ ಹೆಚ್ಚಳ, ಆರೋಗ್ಯ ನಿರೀಕ್ಷಕಿ ಗೀತಾ ವಿಜೇತ್

    ಕೂಡ್ಲಿಗಿ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಅಂಗವಾಗಿ ಪಪಂ ಅಧಿಕಾರಿಗಳು ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ 80 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು.

    ಪಪಂ ಆರೋಗ್ಯ ನಿರೀಕ್ಷಕಿ ಗೀತಾ ವಿಜೇತ್ ಮಾತಾನಾಡಿ, ಪ್ಲಾಸ್ಟಿಕ್ ಬಳಕೆಯಿಂದ ತ್ಯಾಜ್ಯ ಹೆಚ್ಚಾಗುತ್ತದೆ. ಅಲ್ಲದೆ ಅದು ಮಣ್ಣಿನಲ್ಲಿ ಕೊಳೆಯದ ಕಾರಣ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಆರೋಗ್ಯಕ್ಕೂ ಒಳ್ಳೆಯದಲ್ಲ. ಮುಂದಿನ ಪೀಳಿಗೆಗೆ ವಿಷಯುಕ್ತ ಪರಿಸರ ನೀಡದಿರಲು ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಬೇಕು.

    ತರಕಾರಿ, ಹೂವು, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು, ಸೂಪರ್ ಮಾರ್ಕೆಟ್ ಮತ್ತು ಬಸ್ ನಿಲ್ಡಾಣದ ಅಂಗಡಿ ಮಾಲೀಕರು ಪ್ಲಾಸ್ಟಿಕ್ ಬಸಬಾರದು ಎಂದರು. ಪ್ರತಿದಿನ ಪಪಂ ಸಿಬ್ಬಂದಿ ದಾಳಿ ನಡೆಸಲಿದ್ದಾರೆ. ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡುಬಂದಲ್ಲಿ ವಶಕ್ಕೆ ಪಡೆಯುವುದರ ಜತೆಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದಂತೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಪಪಂ ನೈರ್ಮಲ್ಯ ಮೇಸ್ತ್ರಿ ಪರಶುರಾಮ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts