More

    ಪ್ಲಾಸ್ಟಿಕ್ ಧ್ವಜ ಮಾರಿದರೆ ಕ್ರಮ

    ಬೆಳಗಾವಿ: ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಅನ್ವಯ ಪ್ರತಿ ವರ್ಷದಂತೆ ಜ. 26 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

    ಪೊಲೀಸ್ ಇಲಾಖೆ, ಅಗ್ನಿಶಾಮಕ, ಕೆಎಸ್‌ಆರ್‌ಪಿ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿ ಪರೇಡ್‌ನಲ್ಲಿ ಭಾಗವಹಿಸುವವರು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಕೆಎಂಎ್ ಹಾಗೂ ಮಿಠಾಯಿ ಅಸೋಸಿಯೇಷನ್ ವತಿಯಿಂದ ಪರೇಡ್‌ನಲ್ಲಿ ಭಾಗವಹಿಸಿದ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಿಠಾಯಿ ಹಂಚಿಕೆ ಮಾಡಬೇಕು. ಜಿಲ್ಲೆಯ ಎಲ್ಲ ದೇವಾಲಯ, ಮಂದಿರಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕ್ರಮ ಗೊಳ್ಳುವಂತೆ ಸೂಚಿಸಿದರು.

    ಚನಮ್ಮ ವಿಜಯೋತ್ಸವದ 200ನೇ ವರ್ಷಾಚರಣೆ ಮಾಡಲಾಗುತ್ತಿದೆ. ನಗರದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ, ರಸ್ತೆ, ಮೂರ್ತಿ ಬೇರೆ ಬೇರೆ ಸ್ಥಳಗಳಲ್ಲಿವೆ. ಕೋರ್ಟ್ ಆವರಣದ ಹಿಂಬದಿಯಲ್ಲಿರುವ ರಾಯಣ್ಣ ಮೂರ್ತಿಯನ್ನು ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಸ್ಥಳಾಂತರ ಮಾಡಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ಶ್ರೀನಿವಾಸ ತಾಳೂರಕರ ಮನವಿ ಮಾಡಿಕೊಂಡರು. ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ರಾಜೇಂದ್ರ ಕಲಘಟಗಿ, ಭಾವುಕಣ್ಣ ಬಂಕ್ಯಾಗೋಳ, ಮಲ್ಲೇಶ ಚೌಗಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts