More

    ಪ್ಲಾಸ್ಟಿಕ್‌ಮುಕ್ತ ಪರಿಸರ ನಿರ್ಮಾಣ ಗುರಿ

    ಜಗಳೂರು: ಸಂಪೂರ್ಣ ಪ್ಲಾಸ್ಟಿಕ್‌ಮುಕ್ತ ಪರಿಸರ ನಿರ್ಮಿಸುವುದು ಪ್ರತಿಯೊಬ್ಬರ ಗುರಿ ಆಗಬೇಕು ಎಂದು ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಮಹಮದ್ ಯೂನೂಸ್ ಅಥಣಿ ಹೇಳಿದರು.

    ಪಟ್ಟಣ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮನುಷ್ಯನಿಗೆ ಪರಿಸರ ಅತ್ಯಮೂಲ್ಯ. ನಾವು ಅದನ್ನು ರಕ್ಷಣೆ ಮಾಡಿದರೆ, ಅದು ನಮ್ಮನ್ನು ಕಾಪಾಡುತ್ತದೆ. ಮನೆ ಸುತ್ತಲೂ ಸ್ವಚ್ಛತೆ ಕಾಪಾಡಿದಂತೆ ಸಮಾಜದಲ್ಲಿರುವ ಕಸ ಸ್ವಚ್ಛಗೊಳಿಸಿ ಸುಂದರ ವಾತಾವರಣ ಕಲ್ಪಿಸಿದರೆ ಆರೋಗ್ಯಕರ ವಾತಾವರಣ ನಿರ್ಮಾಣವಾಗಲಿದೆ ಎಂದರು.

    ಪ್ರಸಕ್ತ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಅಧಿಕವಾಗಿದೆ. ಕೆಲ ಕಂಪನಿಗಳು ಜನರನ್ನು ಸೆಳೆಯುವ ಕೆಲಸ ಮಾಡುತ್ತಿವೆ. ಅವುಗಳನ್ನು ಹೆಚ್ಚಾಗಿ ಮರು ಬಳಕೆ ಮಾಡಿದರೆ ಗಾಳಿ, ನೀರು, ಆಹಾರದ ಮೂಲಕ ಮನುಷ್ಯನ ದೇಹ ಸೇರಿ ಅನಾರೋಗ್ಯಕ್ಕೆ ತುತ್ತು ಮಾಡುತ್ತದೆ. ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯಿಂದ ಅಂತರ ಕಾಪಾಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.

    ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಮಾತನಾಡಿ, ನಿತ್ಯವೂ ಮುಂಜಾನೆಯಲ್ಲಿ ಹಾಲು, ಸೊಪ್ಪು, ತರಕಾರಿ, ದವಸ, ಧಾನ್ಯ ಖರೀದಿಸಲು ಬರುವ ಗ್ರಾಹಕರು ಕಡ್ಡಾಯವಾಗಿ ಪರಿಸರ ಸ್ನೇಹಿ ಬಟ್ಟೆ ಚೀಲ ಕೈಯಲ್ಲಿ ತಂದರೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಹಕಾರಿಯಾಗುತ್ತದೆ. ಪ್ಲಾಸ್ಟಿಕ್‌ಗೆ ಅವಲಂಬಿತರಾದರೆ ಜೀವನದಲ್ಲಿ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ವಕೀಲರ ಸಂಘದ ಅಧ್ಯಕ್ಷ ಓಂಕಾರಪ್ಪ, ಕಾರ್ಯದರ್ಶಿ ತಿಪ್ಪೇಸ್ವಾಮಿ, ವಕೀಲರಾದ ಬಸವರಾಜಪ್ಪ, ಆರ್. ಓಬಳೇಶ್, ಸಣ್ಣ ಓಬಯ್ಯ, ರುದ್ರೇಶ್, ಬಸವರಾಜ್, ಪಪಂ ಆರೋಗ್ಯ ನಿರೀಕ್ಷಕ ಕಿಫಾಯಿತ್ ಮತ್ತಿತರರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts