More

    ಪ್ಲಾಸ್ಟಿಕ್ ಕೈಚೀಲ ಬಳಸಿದರೆ ದಂಡ

    ಮಸ್ಕಿ: ಪಟ್ಟಣದ ಅಂಗಡಿಗಳ ಮೇಲೆ ಪುರಸಭೆ ಸಿಬ್ಬಂದಿ ಭಾನುವಾರ ದಾಳಿ ನಡೆಸಿ ಪ್ಲಾಸ್ಟಿಕ್ ಕೈಚೀಲಗಳನ್ನು ವಶಪಡಿಸಿಕೊಂಡರು.

    ಸಿಬ್ಬಂದಿ ಕಾರ್ಯಾಚರಣೆ

    ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಕಿರಾಣಿ, ಹಣ್ಣಿನ ಅಂಗಡಿ, ಬೇಕರಿ, ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಕೈಚೀಲ, ಚಹಾದ ಕಪ್, ನೀರಿನ ಲೋಟಗಳು ಸೇರಿ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದರು. ಪ್ಲಾಸ್ಟಿಕ್ ಮಾರಾಟ ತಡೆಗೆ ಪುರಸಭೆ ಸಿಬ್ಬಂದಿ ತಂಡಗಳನ್ನು ರಚಿಸಿದ್ದು, ತರಕಾರಿ ಮಾರುಕಟ್ಟೆ, ಬೀದಿ ಬದಿ ವ್ಯಾಪಾರಿಗಳು, ಹೂ, ಹಣ್ಣು ಮಾರಾಟಗಾರರು, ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್ ಕೈಚೀಲಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಹೇಳಿದರು.

    ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಮಸೂದ್ ಮನೆಗೆ ನೋಟಿಸ್ ಅಂಟಿಸಿದ ಎನ್‌ಐಎ ಅಧಿಕಾರಿಗಳು
    ಪ್ಲಾಸ್ಟಿಕ್ ಬಳಕೆ ನಿಷೇಧಿಸಿರುವ ಕುರಿತು ಪುರಸಭೆಯಿಂದ ವ್ಯಾಪಾರಿಗಳಿಗೆ ನೋಟಿಸ್ ಕೊಡಲಾಗಿದೆ. ನಿಷೇಧದ ನಡುವೆಯೂ ಕೆಲ ವ್ಯಾಪಾರಸ್ಥರು ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡುತ್ತಿದ್ದು ಅಂಥವರಿಗೆ ಎಚ್ಚರಿಕೆ ಕೊಡುತ್ತಿದ್ದೇವೆ. ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡುವುದು ಕಂಡು ಬಂದಲ್ಲಿ ವ್ಯಾಪಾರಿಗಳ ಪರವಾನಗಿ ರದ್ದುಗೊಳಿಸಲಾಗುವುದು. ಅಲ್ಲದೇ ಪೊಲೀಸ್ ದೂರು ನೀಡುವುದಾಗಿ ಮುಖ್ಯಾಧಿಕಾರಿ ನರಸರೆಡ್ಡಿ ತಿಳಿಸಿದರು.

    ಪಟ್ಟಣದ 20 ಕ್ಕೂ ಅಧಿಕ ಅಂಗಡಿಗಳ ಮೇಲೆ ದಾಳಿ ನಡೆಸಿ 15 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಆರೋಗ್ಯ ನಿರೀಕ್ಷಕ ಸೋಮನಾಥ ತಿಳಿಸಿದರು. ಕಿರಿಯ ಆರೋಗ್ಯ ನಿರೀಕ್ಷಕ ಗದ್ದೆಪ್ಪ, ಸುನಿಲ್, ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts