More

    ಪ್ಲಾಸ್ಟಿಕ್ ಮುಕ್ತ ಬಳ್ಳಾರಿ ನಿರ್ಮಾಣಗೊಳ್ಳಲಿ

    ಬಳ್ಳಾರಿ: ಪ್ಲಾಸ್ಟಿಕ್ ಮುಕ್ತ ಬಳ್ಳಾರಿಗೆ ಮಹಾನಗರ ಪಾಲಿಕೆ ಶ್ರಮಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದು ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ತಿಳಿಸಿದರು.

    ಇದನ್ನೂ ಓದಿ: http://ಪ್ಲಾಸ್ಟಿಕ್ ಮುಕ್ತ ಬಳ್ಳಾರಿ ನಿರ್ಮಾಣಗೊಳ್ಳಲಿ

    ನಗರದ ಐತಿಹಾಸಿಕ ಕೋಟೆಯಲ್ಲಿ ಬಳ್ಳಾರಿ ಲಯನ್ಸ್‌ಕ್ಲಬ್‌ಯಿಂದ ಹಮ್ಮಿಕೊಂಡಿದ್ದ ‘ಸ್ವಚ್ಛತೆ ಕಡೆ ನಮ್ಮ ನಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಣ ಮಾಡಿ.

    ಸ್ಟೀಲ್ ಅಥವಾ ತಾಮ್ರ (ಕಾಪರ್) ಬಾಟಲ್‌ಗಳನ್ನು ಬಳಕೆ ಮಾಡಬೇಕು. ಈ ಕುರಿತು ಪಾಲಕರಲ್ಲಿ ಜಾಗೃತಿಯನ್ನು ವಿದ್ಯಾರ್ಥಿಗಳು ಮೂಡಿಸಿ ಎಂದು ಸಲಹೆ ನೀಡಿದರು. ಲಯನ್ಸ್‌ಕ್ಲಬ್ ಅಧ್ಯಕ್ಷ ಸಿದ್ಧರಾಮೇಶ್ವರಗೌಡ ಕರೂರು ಮಾತನಾಡಿ,

    ‘ಬಳ್ಳಾರಿಯ ಐತಿಹಾಸಿಕ ಕೋಟೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಹೊಣೆ. ಚಾರಿತ್ರಿಕವಾಗಿ ಮಹತ್ವ ಹೊಂದಿರುವ ಬಳ್ಳಾರಿ ಕೋಟೆ ಪ್ರೇಕ್ಷಣೀಯ ಸ್ಥಳ. ಇಲ್ಲಿ ಜಿಲ್ಲೆ ಸೇರಿ ಹೊರ ಜಿಲ್ಲೆ, ರಾಜ್ಯಗಳಿಂದಲೂ ಪ್ರವಾಸಿಗರು ಬಂದು ವೀಕ್ಷಣೆ ಮಾಡುತ್ತಾರೆ.

    ಇಂತಹ ಅಪರೂಪದ ತಾಣದಲ್ಲಿ ಯಾವುದೇ ರೀತಿಯ ತ್ಯಾಜ್ಯ ಬಿಸಾಡದೆ ಕೋಟೆ ಸ್ವಚ್ಛತೆಯನ್ನು ಕಾಪಾಡಿ ಎಂದರು. ದಾವಣಗೆರೆಯ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ವೀರೇಂದ್ರ ಪಾಟೀಲ್, ನಗರದ ಹಿರಿಯ ವೈದ್ಯ ಡಾ.ತಿಪ್ಪಾರೆಡ್ಡಿ ಕರೂರು, ಶಾಲೆಯ ಅಧ್ಯಕ್ಷ ಪಂಪನಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts