More

    ಮಸೀದಿಗಳಿಗೆ ಮಹಿಳೆಯರ ಪ್ರವೇಶ ಬೇಕೆ, ಬೇಡವೆ?: ಪ್ರತಿಕ್ರಿಯೆಗೆ ಸುಪ್ರೀಂ ಕೋರ್ಟ್ ಸೂಚನೆ

    ನವದೆಹಲಿ: ದೇಶದಾದ್ಯಂತ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

    ಮಹಿಳೆಯರ ಪ್ರವೇಶ ನಿರ್ಬಂಧ ಮಾಡಿರುವುದು ಅಸಾಂವಿಧಾನಿಕ ಕ್ರಮವಾಗಿದೆ. ಇದು ಲಿಂಗ ಸಮಾನತೆ ಹಾಗೂ ಸಹಜ ನ್ಯಾಯಕ್ಕೆ ವಿರುದ್ಧವಾದುದು ಎಂದು ಅರ್ಜಿದಾರರು ವಾದಿಸಿದ್ದಾರೆ.

    ಇದನ್ನೂ ಓದಿ ಸತ್ತೇ ಹೋಗಿದ್ದಾನೆ ಎಂದುಕೊಂಡವ 45 ವರ್ಷಗಳ ನಂತರ ಪತ್ನಿ ಮುಂದೆ ಪ್ರತ್ಯಕ್ಷನಾದಾಗ..!

    ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠ, ಅರ್ಜಿಯ ವಿಚಾರಣೆ ನಡೆಸಲು ಸಮ್ಮತಿಸಿತು.

    ಅಲ್ಪಸಂಖ್ಯಾತರ ವ್ಯವಹಾರಗಳ ಖಾತೆ, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗಳಿಗೆ ಕೂಡ ನೋಟಿಸ್ ಜಾರಿ ಮಾಡಿದ ಪೀಠ, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.

    ಮಸೀದಿ ಪ್ರವೇಶಕ್ಕೆ ಧರ್ಮ, ಕುಲ, ಜಾತಿ, ಲಿಂಗ ಅಥವಾ ಹುಟ್ಟಿನ ಆಧಾರದಲ್ಲಿ ಯಾವುದೇ ತಾರತಮ್ಯ ಇರಕೂಡದು ಎಂದು ಪುಣೆಯ ಮಹಿಳೆಯೊಬ್ಬರು ತಮ್ಮ ಈ ಅರ್ಜಿಯಲ್ಲಿ ವಾದಿಸಿದ್ದಾರೆ.

    ಇದನ್ನೂ ಓದಿ ರೈತ ಮಹಿಳೆಗೆ ಅವಾಜ್ ಹಾಕಿದ ಸಚಿವ ಮಾಧುಸ್ವಾಮಿ!

    ಬೆಂಗಳೂರು, ಚೆನ್ನೈ, ಹೈದರಾಬಾದ್​ಗಳಲ್ಲಿ ಶೀಘ್ರವೇ ಸಿಗಲಿದೆ ತಿರುಪತಿ ಲಡ್ಡು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts