More

    ‘ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ’ ಎಂಬ ಸುಳ್ಳನ್ನು ನಂಬಿ: ರಾಜ್ಯದ ಜನರಲ್ಲಿ ಕಾಂಗ್ರೆಸ್ ಮನವಿ

    ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ನೇಮಕಗೊಂಡಿದ್ದು, ಈ ಬಗ್ಗೆ ಕರ್ನಾಟಕ ಕಾಂಗ್ರೆಸ್​ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿರುವುದು ಗಮನ ಸೆಳೆದಿದೆ.

    “ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ “ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು ಎಂದು ಕರ್ನಾಟಕ ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾದಲ್ಲಿ ವಿಭಿನ್ನವಾಗಿ ಶುಭ ಹಾರೈಸಿದೆ.

    ಇದನ್ನೂ ಓದಿ: ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ಪಟ್ಟ; ರಾಜ್ಯದಲ್ಲಿ ತಗ್ಗಿಲ್ಲ ರಾಜಾಹುಲಿ ಪ್ರಭಾವ!

    ಮಾತ್ರವಲ್ಲದೆ, ಇದೇ ವಿಚಾರವನ್ನು ರಾಜಕೀಯ ಟೀಕೆಗೆ ಅಸ್ತ್ರವಾಗಿ ಬಳಸಿಕೊಂಡಿರುವ ಕಾಂಗ್ರೆಸ್, “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂಬುದಾಗಿ ಹೇಳಿಕೊಂಡಿದೆ.

    ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಬಿ.ಎಲ್​. ಸಂತೋಷ್​ ಏನಂದ್ರು ಗೊತ್ತಾ?

    ಕಾಂಗ್ರೆಸ್​ನ ಈ ರಾಜಕೀಯಾತ್ಮಕ ಪೋಸ್ಟ್​ಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಕಾಂಗ್ರೆಸ್​ಗೆ ಇದು ಒಂಥರಾ ತಿರುಗುಬಾಣದಂತಾಗಿಯೂ ಆಗಿದೆ. ಏಕೆಂದರೆ, ಕಾಂಗ್ರೆಸ್​ನಲ್ಲಿಯೂ ಹೇಗೆ ಕುಟುಂಬ ರಾಜಕಾರಣ ಇದೆ ಎಂಬುದನ್ನು ಕೆಲವರು ಬೊಟ್ಟು ಮಾಡಿ ತೋರಿಸಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಅವರ ಮುಂದಿರುವ ಸವಾಲುಗಳು ಯಾವುವು?

    ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಹಿಂದೆ ಏನೇನಿದೆ ಲೆಕ್ಕಾಚಾರ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts