More

    ಗೃಹಸಚಿವರ ಮೇಲೆ ಯಾರು ಅತ್ಯಾಚಾರ ನಡೆಸಿದ್ದಾರೆ?; ತನಿಖೆ ನಡೆಸಿ ಬಹಿರಂಗಪಡಿಸಿ ಎಂದು ಆಗ್ರಹ

    ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಗ್ಯಾಂಗ್​ರೇಪ್​ಗೆ ಸಂಬಂಧಿತ ವಿಚಾರ ರಾಜ್ಯದ ಗೃಹಸಚಿವರನ್ನೇ ಕೆಲವು ಕಾಲ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿತ್ತು. ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ನೀಡಿದ್ದ ಪ್ರತಿಕ್ರಿಯೆಯೇ ಅವರಿಗೆ ವ್ಯತಿರಿಕ್ತವಾಗಿ ಪರಿಣಮಿಸಿದ್ದೂ ಆಗಿದೆ.

    ಈ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯು ಹೈಗ್ರೌಂಡ್ಸ್​ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವರನ್ನೇ ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂಬ ಆಗ್ರಹವನ್ನೂ ವ್ಯಕ್ತಪಡಿಸಿದೆ. ಅತ್ಯಾಚಾರ ಪ್ರಕರಣದ ಕುರಿತಾಗಿ ಪ್ರತಿಕ್ರಿಯಿಸುವ ವೇಳೆ ಗೃಹಸಚಿವರು ಆಡಿರುವ ಒಂದು ಮಾತೇ ಇಷ್ಟಕ್ಕೆಲ್ಲ ಕಾರಣವಾಗಿದೆ.

    ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಷಯವನ್ನು ಪ್ರಸ್ತಾಪಿಸುವ ಸಂದರ್ಭದಲ್ಲಿ, ಕಾಂಗ್ರೆಸಿಗರು ನನ್ನ ಮೇಲೆ ಅತ್ಯಾಚಾರ ಮಾಡಲು ಮುಂದಾಗಿದ್ದಾರೆ ಎಂಬ ಹೇಳಿಕೆಯನ್ನೇ ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಈ ದೂರನ್ನು ನೀಡಿದೆ. ಗೃಹಸಚಿವರ ಮೇಲೆ ಯಾರು ಅತ್ಯಾಚಾರ ನಡೆಸಿದ್ದಾರೆ ಎಂಬುದನ್ನು ಕೂಡಲೇ ತನಿಖೆ ನಡೆಸಿ ಬಹಿರಂಗಪಡಿಸಬೇಕು. ಇಲ್ಲದಿದ್ದರೆ ಗೃಹಸಚಿವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಸತ್ಯಾಂಶವನ್ನು ರಾಜ್ಯದ ಜನತೆಯ ಮುಂದೆ ಬಹಿರಂಗಪಡಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ಪೊಲೀಸರಿಗೆ ದೂರು ನೀಡಿದ್ದಾರೆ.

    ‘ನೋ ಪಾರ್ಕಿಂಗ್’ ಬೋರ್ಡ್ ಇಲ್ಲ ಅಂತ ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿದ್ರೆ ಜೋಕೆ…

    150 ಮಿಡಿ ಮಾವಿನ ತಳಿ ರೂಪಿಸಿದ ಅಪರೂಪದ ರೈತ ಇವರು…

    ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts