22.5 C
Bengaluru
Sunday, January 19, 2020

‘ಸ್ವಾಭಿಮಾನಿ ಜನತೆಯಲ್ಲಿ ಒಂದು ಮನವಿ…ನನ್ನ ನಕಲಿ ಫೇಸ್​ಬುಕ್​ ಖಾತೆಯನ್ನು ಅನ್​ಫಾಲೋ ಮಾಡಿ’ ಎಂದು ಪೋಸ್ಟ್​ ಹಾಕಿದ ಸುಮಲತಾ ಅಂಬರೀಷ್​

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್​ಗೆ ನಕಲಿ ಫೇಸ್​ಬುಕ್​ ಖಾತೆ ಹಾವಳಿ ಇನ್ನೂ ತಪ್ಪಿಲ್ಲ.
ನನ್ನ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆಯಲಾಗುತ್ತಿದೆ. ಅದರಲ್ಲಿ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದು ಈ ಮೂಲಕ ನನ್ನ ತೇಜೋವಧೆ ಆಗುತ್ತಿದೆ ಎಂದು ಸುಮಲತಾ ಅಂಬರೀಷ್​ ಸೆಪ್ಟೆಂಬರ್​ 6ರಂದು ಪೊಲೀಸರಿಗೆ ದೂರು ನೀಡಿದ್ದರು.

ಚುನಾವಣಾ ಪೂರ್ವದಿಂದಲೂ ಹಲವು ಖಾತೆಗಳನ್ನು ಸುಮಲತಾ ಹೆಸರಿನಲ್ಲಿ ತೆರೆಯಲಾಗಿತ್ತು. ಆಗಿನಿಂದಲೂ ಅವುಗಳನ್ನೆಲ್ಲ ತೆಗೆದುಹಾಕಿದ್ದರೂ ಇನ್ನೂ ಒಂದು ಉಳಿದಿದೆ. ಈ ಬಗ್ಗೆ ಸೈಬರ್​ ಪೊಲೀಸರಿಗೆ ತಿಳಿಸಿದ್ದೇನೆ ಎಂದಿದ್ದರು. ಅಷ್ಟಾದರೂ ಈ ಸಮಸ್ಯೆಯಿಂದ ಹೊರಬರಲು ಸುಮಲತಾ ಅಂಬರೀಷ್​ಗೆ ಸಾಧ್ಯವಾಗಿಲ್ಲ. ಪೊಲೀಸರಿಗೆ ದೂರು ನೀಡಿದ್ದರೂ ಸುಮಲತಾ ಅಂಬರೀಷ್​ ಹೆಸರಿನಲ್ಲಿರುವ ನಕಲಿ ಫೇಸ್​ಬುಕ್​ ಖಾತೆ ಸ್ಥಗಿತಗೊಂಡಿಲ್ಲ ಎನ್ನಲಾಗಿದೆ. ಹಾಗಾಗಿ ಇಂದು ಮತ್ತೆ ಸುಮಲತಾ ಅವರು ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಾಕಿದ್ದಾರೆ.

ನನ್ನ ಸ್ವಾಭಿಮಾನಿ ಅಭಿಮಾನಿಗಳು, ಸ್ವಾಭಿಮಾನಿ ಜನತೆಯಲ್ಲಿ ಒಂದು ಮನವಿ ಮಾಡಿಕೊಳ್ಳುತ್ತೇನೆ. ಕೆಲವು ತಿಂಗಳುಗಳಿಂದಲೂ ಒಂದಷ್ಟು ಜನ ಕಿಡಿಗೇಡಿಗಳು ನನ್ನ ಭಾವಚಿತ್ರ ಹೊಂದಿರುವ ನಕಲಿಫೇಸ್​ಬುಕ್​ ಖಾತೆಯನ್ನು ತೆರೆದು ಅದರಲ್ಲಿ ಸಲ್ಲದ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ.

ರಾಜಕೀಯ ದುರುದ್ದೇಶ ಹಾಗೂ ನನ್ನ ಸ್ವಾಭಿಮಾನಿ ಜನತೆಯ ಗಮನವನ್ನು ಬೇರೆಕಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಸ್ವಾಭಿಮಾನಿ ಜನತೆಗೆ ನೋವುಂಟುಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ನನ್ನ ಅಧಿಕೃತ ಖಾತೆ ಅಲ್ಲವೇ ಅಲ್ಲ. ಹಾಗಾಗಿ ಯಾರೂ ಆ ಫೇಸ್​ಬುಕ್​ ಅಕೌಂಟ್​ ಹಿಂಬಾಲಿಸಬೇಡಿ. ಅದರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಬರೆದಿದ್ದಾರೆ.

ಸಂಸದೆ ಸುಮಲತಾ ಅಂಬರೀಷ್​ ಅವರು ತಮ್ಮದಲ್ಲ, ನಕಲಿ ಎಂದು ಹೇಳುತ್ತಿರುವ ಫೇಸ್​ಬುಕ್​ ಪೇಜ್​ನ್ನು ಈಗಾಗಲೇ 35,654 ಜನರು ಲೈಕ್​ ಮಾಡಿದ್ದಾರೆ. 40 ಸಾವಿರಕ್ಕೂ ಹೆಚ್ಚು ಮಂದಿ ಫಾಲೋ ಮಾಡುತ್ತಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...