More

    ರೈತರಿಗೆ ಶುಭ ಸುದ್ದಿ: ಪಿಎಂ ಕಿಸಾನ್ ಯೋಜನೆಯಡಿ 14ನೇ ಕಂತಿನ ಹಣ ಬಿಡುಗಡೆ

    ದೆಹಲಿ: ಕೇಂದ್ರ ಸರ್ಕಾರವು ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ.

    ರಾಜಸ್ಥಾನದ ಸಿಕರ್​​ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ಸುಮಾರು 8.5 ಕೋಟಿ ರೈತ ಫಲಾನುಭವಿಗಳಿಗೆ ಅಂದಾಜು 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ರೈತರ ಖಾತೆಗಳಿಗೆ ಹಣ ನೇರವಾಗಿ ವರ್ಗಾವಣೆ ಆಗಲಿದ್ದು, ಶೀಘ್ರವೇ 2000 ರೂ. ಜಮೆಯಾಗಲಿದೆ.

    ಇದನ್ನೂ ಓದಿ: ಸಾಲ ವಾಪಸ್ಸು ನೀಡಲಿಲ್ಲ ಎಂದು ಪತಿಯ ಸಮ್ಮುಖದಲ್ಲೇ ಪತ್ನಿಗೆ ಲೈಂಗಿಕ ಕಿರುಕುಳ

    ಅಲ್ಲದೇ, ಪ್ರಧಾನಿ ಮೋದಿ 1.25 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು (ಪಿಎಂಕೆಎಸ್‌ಕೆ) ದೇಶಕ್ಕೆ ಸಮರ್ಪಿಸಿದ್ದಾರೆ. ಇದರಿಂದ ಗ್ರಾಮ ಮತ್ತು ಬ್ಲಾಕ್ ಮಟ್ಟದಲ್ಲಿ ಕೋಟ್ಯಾಂತರ ರೈತರಿಗೆ ನೇರ ಪ್ರಯೋಜನವನ್ನು ನೀಡಲಾಗುವುದು ಜತೆಗೆ ರೈತರಿಗಾಗಿ ಡಿಜಿಟಲ್ ವಾಣಿಜ್ಯಕ್ಕಾಗಿ ಮುಕ್ತ ನೆಟ್‌ವರ್ಕ್ (ONDC) ಅನ್ನು ಸಹ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪಿಎಂ ಕಿಸಾನ್ ಯೋಜನೆಯ ನೋಂದಣಿ ಪ್ರಕ್ರಿಯೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಫಲಾನುಭವಿಗಳಿಗೆ ಅನುಕೂಲವಾಗುವಂತೆ ಕೇಂದ್ರೀಕೃತ ಹೆಲ್ಪ್ ಡೆಸ್ಕ್​​ನ್ನು ಪರಿಚಯಿಸಲಾಗಿದೆ ಎಂದು ಪಿಎಂ ಕಿಸಾನ್ ಹ್ಯಾಂಡಲ್‌ನಲ್ಲಿ ಅಧಿಕೃತ ಟ್ವೀಟ್ ತಿಳಿಸಿದೆ. 2019ರಲ್ಲಿ ಔಪಚಾರಿಕವಾಗಿ ಪ್ರಾರಂಭವಾದ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರಾರಂಭದಿಂದಲೂ ಫಲಾನುಭವಿಗಳಿಗೆ ಒಟ್ಟು ಸುಮಾರು 2.59 ಲಕ್ಷ ಕೋಟಿ ರೂಪಾಯಿಗಳನ್ನು ವರ್ಗಾಯಿಲಾಗಿದೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts