

PM Modi: ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಾರ್ಷಿಕ ಉನ್ನತ ಮಟ್ಟದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಚರ್ಚೆಯಲ್ಲಿ ಮಾತನಾಡುವುದಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಬಿಡುಗಡೆ ಮಾಡಲಾದ ಪರಿಷ್ಕೃತ ತಾತ್ಕಾಲಿಕ ಭಾಷಣಕಾರರ ಪಟ್ಟಿ ತಿಳಿಸಿದೆ.
ಯುಎನ್ ಸಾಮಾನ್ಯ ಸಭೆಯ 80 ನೇ ಅಧಿವೇಶನದ ಉನ್ನತ ಮಟ್ಟದ ಸಾಮಾನ್ಯ ಚರ್ಚೆಗೆ ಭಾಷಣಕಾರರ ಪರಿಷ್ಕೃತ ತಾತ್ಕಾಲಿಕ ಪಟ್ಟಿಯ ಪ್ರಕಾರ, ಭಾರತ ಪರವಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೆಪ್ಟೆಂಬರ್ 27 ರಂದು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಜುಲೈನಲ್ಲಿ ಬಿಡುಗಡೆ ಮಾಡಲಾದ ಸ್ಪೀಕರ್‌ಗಳ ಹಿಂದಿನ ತಾತ್ಕಾಲಿಕ ಪಟ್ಟಿಯ ಪ್ರಕಾರ, ಮೋದಿ ಅವರು ಸೆಪ್ಟೆಂಬರ್ 26 ರಂದು ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು.
ಯುಎನ್ನ ಸಾಮಾನ್ಯ ಸಭೆಯ 80ನೇ ಅಧಿವೇಶನವು ಸೆಪ್ಟೆಂಬರ್ 9 ರಂದು ಆರಂಭವಾಗಲಿದೆ. ಉನ್ನತ ಮಟ್ಟದ ಚರ್ಚೆಯಲ್ಲಿ ಸೆಪ್ಟೆಂಬರ್ 23 ರಿಂದ 29 ರವರೆಗೆ ನಡೆಯಲಿದ್ದು, ಅಧಿವೇಶನದ ಮೊದಲ ಭಾಷಣಕಾರ ಬ್ರೆಜಿಲ್ ಆಗಿದ್ದರೆ, ನಂತರ ಅಮೆರಿಕ ಇದೆ. ನಂತರ ಇಸ್ರೇಲ್, ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಮುಖ್ಯಸ್ಥರು ಸೆಪ್ಟೆಂಬರ್ 26 ರಂದು ಯುಎನ್‌ಜಿಎ ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ಅಮೆರಿಕದ ಶ್ವೇತಭವನದಲ್ಲಿ ಟ್ರಂಪ್ರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲು ಮೋದಿ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಟ್ರಂಪ್ ಭಾರತದ ಮೇಲೆ ಒಟ್ಟು ಶೇ.50% ಸುಂಕವನ್ನು ವಿಧಿಸಿದ್ದಾರೆ. ಇದರಲ್ಲಿ ಭಾರತ ರಷ್ಯಾದ ತೈಲ ಖರೀದಿಗೆ ಶೇ.25 ಸುಂಕವೂ ಸೇರಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ 23 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವೇದಿಕೆಯಿಂದ ವಿಶ್ವ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. (ಏಜೆನ್ಸೀಸ್)