More

    ಸೇನಾ ಹೆಲಿಕಾಪ್ಟರ್ ದುರಂತ: ಜನರಲ್ ಬಿಪಿನ್ ರಾವತ್ ನಿಧನಕ್ಕೆ ಪಿಎಂ ಸೇರಿದಂತೆ ಗಣ್ಯರಿಂದ ಸಂತಾಪ..!

    ತಮಿಳುನಾಡಿನ ಕೊನೂರಿನ ಸಮೀಪ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ಸಂತಾಪ ಸೂಚಿಸಿದ್ದಾರೆ.

    ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪಿಎಂ, ಜನರಲ್​​ ಬಿಪಿನ್​​ ರಾವತ್​​ ಓರ್ವ ಅತ್ಯುತ್ತಮ ಸೈನಿಕರಾಗಿದ್ದರು. ನಿಜವಾದ ದೇಶಭಕ್ತ. ಭಾರತೀಯ ಸಶಸ್ತ್ರ ಪಡೆ ಮತ್ತು ಭದ್ರತಾ ಉಪಕರಣ ಆಧುನೀಕರಣಗೊಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಿಧನ ನನಗೆ ತೀವ್ರ ದುಃಖ ತಂದಿದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

    ಬೊಮ್ಮಾಯಿ ತೀವ್ರ ಸಂತಾಪ:

    ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಎಂದು ಹೇಳಿದ್ದಾರೆ.

    ಬಿಎಸ್​​ವೈ ಸಂತಾಪ:

    ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ಸೇನಾ ಸಿಬ್ಬಂದಿ ದುರಂತ ಸಾವಿನ ಬಗ್ಗೆ ಪದಗಳಲ್ಲಿ ಹೇಳಲಾಗದಷ್ಟು ಆಘಾತ ಮತ್ತು ದುಃಖವಾಗಿದೆ. ಮೃತರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

    ಇನ್ನು ಅನೇಕ ರಾಷ್ಟ್ರ ಮತ್ತು ರಾಜ್ಯ ನಾಯಕರು, ಗಣ್ಯರು ಬಿಪಿನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ; ಜನರಿಗೆ ಸೂಕ್ತ ಮಾಹಿತಿ ನೀಡುವಂತೆ ತನಿಖೆಯಾಗಬೇಕು: ಸುಬ್ರಮಣ್ಯಸ್ವಾಮಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts