

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.
ಗ್ರೀಸ್ನ ಅಥೆನ್ಸ್ನಿಂದ ನೇರವಾಗಿ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ರಾಜ್ಯ ಪೋಲಿಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಪೋಲಿಸ್ ಆಯುಕ್ತ ದಯಾನಂದ್ ಆತ್ಮೀಯವಾಗಿ ಬರಮಾಡಿಕೊಂಡರು.
ಇನ್ನು ಎಚ್ಎಎಲ್ ಮುಂಭಾಗ ಚಿಕ್ಕ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಪಿಎಂ ಮೋದಿ ಭಾಷಣ ಮಾಡುವ ಸಾಧ್ಯತೆ. ವೇದಿಕೆ ಮುಂಭಾಗ ಜನರು ನಿಲ್ಲಲು ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮೇಲೆ ಒಬ್ಬರಿಗೆ ಮಾತ್ರ ನಿಲ್ಲಲು ಅವಕಾಶ ಇದೆ. ವೇದಿಕೆ ಮೇಲೆ ಕೂರಲು ಯಾವುದೇ ಆಸನದ ವ್ಯವಸ್ಥೆ ಇಲ್ಲ. 8.30 ರಿಂದ 8.45ರ ವರೆಗೆ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. ಇಸ್ರೋ ಭೇಟಿ ಮುಗಿಸಿ ಬಂದ ಬಳಿಕ ಎಚ್ಎಎಲ್ನಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ಚಂದ್ರಯಾನದ ಹಾದಿ
* ಜುಲೈ 14 – ಉಡಾವಣೆ
* ಆಗಸ್ಟ್ 5 – ಚಂದ್ರನ ಕಕ್ಷೆಗೆ ಪ್ರವೇಶ
* ಆಗಸ್ಟ್ 17 – ಲ್ಯಾಂಡರ್ ಮಾಡ್ಯೂಲ್ ಬೇರ್ಪಡೆಯಾಗುವ ಪ್ರಕ್ರಿಯೆ ಯಶಸ್ವಿ
* ಆಗಸ್ಟ್ 6, 9, 14 ಮತ್ತು 16 – ಉಪಗ್ರಹದ ಕಕ್ಷೆ ಬದಲಾವಣೆ
* ಹಂತ-ಹಂತವಾಗಿ ಚಂದ್ರನ ಹತ್ತಿರಕ್ಕೆ ಬಂದ ನೌಕೆ
* ಆಗಸ್ಟ್ 23 – ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ ಲ್ಯಾಂಡರ್
*1959ರಲ್ಲಿ ಜಾಗತಿಕವಾಗಿ ಮೊದಲ ಬಾರಿ ರಷ್ಯಾವು ಯಶಸ್ವಿಯಾಗಿ ಚಂದ್ರನ ಮೇಲ್ಮೈ ಪ್ರವೇಶಿಸಿತ್ತು.
*1966ರಲ್ಲಿ ಅಮೆರಿಕ ಕೂಡ ಯಶಸ್ವಿಯಾಗಿ ಚಂದ್ರನ ಮೇಲ್ಮೈ ಪ್ರವೇಶಿಸಿದೆ
*2013ರಲ್ಲಿ ಚೀನಾವು ಯಶಸ್ವಿಯಾಗಿ ಚಂದ್ರನ ಮೇಲ್ಮೈ ಪ್ರವೇಶಿಸಿತ್ತು.
*600 ಕೋಟಿ ರೂ.: ಚಂದ್ರಯಾನ-3 ಕೈಗೊಳ್ಳಲು ಇಸ್ರೋಗೆ ತಗುಲಿದ ವೆಚ್ಚ
*40 ದಿನ: ಒಟ್ಟು ಅಂತರಿಕ್ಷದಲ್ಲಿ ಪ್ರಯಾಣಿಸಿದ ನೌಕೆ
*3.84 ಲಕ್ಷ: ಕಿ.ಮೀ ಕ್ರಮಿಸಿದ ದೂರ