ತಾಯಿ ಹೀರಾಬೆನ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಧಾವಿಸಿದ ಪ್ರಧಾನಿ ಮೋದಿ

modi
Published on

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರನ್ನು ನೋಡಲು ಮೋದಿ ಆಸ್ಪತ್ರೆಗೆ ಬಂದಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಯುಎನ್ ಮೆಹ್ತಾ ಆಸ್ಪತ್ರೆವರೆಗೆ ಬಿಗಿ ಪೊಲೀಸ್ ಬಂದೋಬಸ್ತ್​​ನಲ್ಲಿ ನರೇಂದ್ರ ಮೋದಿ ತಾಯಿಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದರು. ಈ ಮಧ್ಯೆ, ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಯುಎನ್​ ಮೆಹ್ತಾ ಆಸ್ಪತ್ರೆ ತಿಳಿಸಿದೆ.

ಮೋದಿ ತಾಯಿ ಹೀರಾಬೆನ್ ಅವರು ಕಳೆದ ಜೂ.18 ರಂದು ನೂರನೇ ವರ್ಷಕ್ಕೆ ಕಾಲಿಟ್ಟಿದ್ದರು. ಇತ್ತೀಚೆಗೆ ಗುಜರಾತ್ ಚುನಾವಣೆಯ ವೇಳೆ ಮೋದಿ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡು ಬಂದಿದ್ದರು.

ಮಂಗಳವಾರ (ಡಿ.27) ರಂದು ಮೈಸೂರಿನ ಕಡಕೊಳ ಬಳಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಅಪಘಾತಕ್ಕೀಡಾಗಿತ್ತು. ಸದ್ಯ ಅವರು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net