More

    ಪ್ರಧಾನಿ ಮೋದಿಗೆ ಫ್ರಾನ್ಸ್​​ನಲ್ಲಿ ಭವ್ಯ ಸ್ವಾಗತ: ಬಾಸ್ಟಿಲ್ ಡೇ ಪಥಸಂಚಲನದಲ್ಲಿ ಭಾಗಿ, ದ್ವಿಪಕ್ಷೀಯ ರಕ್ಷಣಾ ಸಂಬಂಧದ ಬಗ್ಗೆ ಮಾತುಕತೆ

    ಪ್ಯಾರಿಸ್​​: ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಪ್ರವಾಸಕ್ಕಾಗಿ ಫ್ರಾನ್ಸ್‌ಗೆ ತೆರಳಿದ್ದು, ದ್ವಿಪಕ್ಷೀಯ ರಕ್ಷಣಾ ಸಂಬಂಧಗಳ ಕುರಿತಾದ ಮಾತುಕತೆ ಮಹತ್ತರ ಪಾತ್ರವನ್ನು ವಹಿಸಲಿದೆ.

    ಇದನ್ನೂ ಓದಿ: VIDEO | ಲಿಫ್ಟ್​​​ ನಿಂತಿದ್ದಕ್ಕೆ ವಾಚ್​ಮನ್​​ಗೆ ಪೊರಕೆಯಿಂದ ಥಳಿಸಿದ ತಾಯಿ, ಮಗನಿಂದ ಕೊಲೆ ಬೆದರಿಕೆ

    ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಓರ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಭವ್ಯವಾಗಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದು, ಫ್ರಾನ್ಸ್​​​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜತೆಗೆ ಹಲವಾರು ಚರ್ಚೆಗಳನ್ನು ನಡೆಸಲಿದ್ದಾರೆ.

    ಫ್ರೆಂಚ್ ರಾಷ್ಟ್ರೀಯ ದಿನಾಚರಣೆ ಅಥವಾ ಪ್ಯಾರಿಸ್‌ನಲ್ಲಿ ಬಾಸ್ಟಿಲ್ ಡೇ ಆಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಭೇಟಿ ವಿಶೇಷವಾಗಿದೆ. ಈ ಭೇಟಿಯ ಬಗ್ಗೆ ಆಶಾವಾದ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಇದು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ಚೈತನ್ಯವನ್ನು ತುಂಬುತ್ತದೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ. ಮ್ಯಾಕ್ರನ್ ಜತೆಗಿನ ಚರ್ಚೆ ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಸಂಬಂಧಗಳ ಮುಂದಿನ 25 ವರ್ಷಗಳಲ್ಲಿ ಈ ದೀರ್ಘಾವಧಿಯ ಮತ್ತು ಅಲ್ಪಾವಧಿಯ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ವ್ಯಾಪಕ ಚರ್ಚೆಗಳನ್ನು ನಡೆಸುವುದಾಗಿ ತಿಳಿಸಿದ್ದಾರೆ.

    ಇದನ್ನೂ ಓದಿ: ಲಂಚ ತೆಗೆದುಕೊಂಡಿದ್ದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

    ಭಾರತ ಮತ್ತು ಫ್ರಾನ್ಸ್ ನಡುವಿನ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆಯೂ ಒಟ್ಟಾಗಿ ಕೆಲಸ ಮಾಡುವುದರ ಜತೆಗೆ ಊಭಯ ದೇಶಗಳ ನಡುವಿನ ಸಹಕಾರದ ಬಗ್ಗೆ ಮತ್ತಷ್ಟು ಒತ್ತಿ ಹೇಳಿದ್ದಾರೆ. ಅಲ್ಲದೇ, ಉಭಯ ದೇಶಗಳ ನಂಬಿಕೆ ಮತ್ತು ಬದ್ಧತೆಯಿಂದಾಗಿ ಎರಡು ದೇಶಗಳ ರಕ್ಷಣೆ, ಬಾಹ್ಯಾಕಾಶ, ನೀಲಿ ಆರ್ಥಿಕತೆ, ವ್ಯಾಪಾರ, ಹೂಡಿಕೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿಕಟವಾಗಿ ಸಹಕರಿಸುತ್ತವೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts