'ಮಹದೇವ'ನ ಹೆಸರಲ್ಲೂ ಲೂಟಿ ಹೊಡೆದ ಕಾಂಗ್ರೆಸ್​-ಪ್ರಧಾನಿ ಮೋದಿ ವಾಗ್ದಾಳಿ

pm modi
Published on

ರಾಯಪುರ(ಛತ್ತೀಸ್‌ಗಢ ): ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಿಮ್ಮನ್ನು ಲೂಟಿ ಮಾಡಲು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.

ದುರ್ಗ್‌ನಲ್ಲಿ ಶನಿವಾರ ಆಯೋಜಿಸಿದ್ದ ರಾಜಕೀಯ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್ ಅಕ್ರಮ ಹಣವನ್ನು ಬಳಸುತ್ತಿದೆ. ಅವರು ಮಹಾದೇವನ ಹೆಸರನ್ನು ಸಹ ಬಿಡಲಿಲ್ಲ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಹೆಸರು ಮಹದೇವ್ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ತನಿಖೆಯಲ್ಲಿ ಬಹಿರಂಗವಾದ ಒಂದು ದಿನದ ನಂತರ ಪ್ರಧಾನಿ ಮೋದಿ ಅವರು ವಾಗ್ಧಾಳಿ ನಡೆಸಿದರು.

ಮಹಾದೇವ್ ಬೆಟ್ಟಿಂಗ್ ಆಪ್ ಪ್ರವರ್ತಕರಿಂದ ಬಾಘೇಲ್ 508 ಕೋಟಿ ಪಡೆದಿದ್ದಾರೆ ಎಂದು ಇಡಿ ಹೇಳಿದೆ

ತನಿಖಾ ಸಂಸ್ಥೆಯು ತನಿಖೆ ಇನ್ನೂ ಮುಂದುವರೆದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ನಂತರ ಎಲ್ಲಾ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಛತ್ತೀಸ್‌ಗಢವನ್ನು ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಪ್ರತಿ ಪೈಸೆಯನ್ನೂ ಅವರಿಂದ ತೆಗೆದುಕೊಳ್ಳಲಾಗುವುದು, ಇಂತಹ ಹಗರಣಗಳ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಸಲಾಗುವುದು. ನಿಮ್ಮನ್ನು ಲೂಟಿ ಮಾಡಿದವರ ವಿರುದ್ಧ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇವೆ. ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ ಎಂದರು.

ನವೆಂಬರ್ 7 ಮತ್ತು 17 ರಂದು ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಪ್ರಚಾರಕ್ಕಾಗಿ "ಹವಾಲಾ" ಹಣವನ್ನು ಬಳಸುತ್ತಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದರು.

ಈ ನಡುವೆ ಬಘೆಲ್ ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಅನ್ನು ಎದುರಿಸಲು ವಿಫಲವಾದ ನಂತರ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ತನಿಖಾ ಸಂಸ್ಥೆಗಳ ಸಹಾಯವನ್ನು ಪಡೆದಿದ್ದಾರೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net