ಪೋರ್ಟ್ ಆಫ್ ಸ್ಪೇನ್: ಐದು ದೇಶಗಳ ಪ್ರವಾಸದ ಭಾಗವಾಗಿ ಘಾನಾ ಪ್ರವಾಸ ಮುಗಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಟ್ರಿನಿಡಾಡ್ ಮತ್ತು ಟೊಬ್ಯಾಗೊಗೆ ಆಗಮಿಸಿದ್ದಾರೆ. ಮೋದಿ ಅವರನ್ನು ಪ್ರಧಾನಿ ಕಮಲಾ ಪ್ರಸಾದ್ ಬಿಸ್ಟೇಸ್ವರ್ ಪಿಯಾರ್ಕೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಇದನ್ನೂ ಓದಿ: ಭಾರತೀಯ ಸೇನೆ ಬಲಪಡಿಸಲು ಬರ್ತಿದೆ ಹಾರುವ ಟ್ಯಾಂಕ್: ಇದರ ಶಕ್ತಿ ಮುಂದೆ ಎದುರಾಳಿ ಮಂಡಿಯೂರಲೇಬೇಕು! Apache helicopters
ಪ್ರಧಾನಿ ಮೋದಿ ಎರಡು ದಿನಗಳ ಟ್ರಿನಿಡಾಡ್ ಮತ್ತು ಟೊಬಾಗೋ ಭೇಟಿಗಾಗಿ ಗುರುವಾರ (03) ಪೋರ್ಟ್ ಆಫ್ ಸ್ಪೇನ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರು ಆಯೋಜಿಸಿದ್ದ ಸಾಂಪ್ರದಾಯಿಕ ಭೋಜನಕೂಟದಲ್ಲಿ ಮೋದಿ ಭಾಗಿಯಾಗಿದ್ದಾರೆ.
The dinner hosted by Prime Minister Kamla Persad-Bissessar had food served on a Sohari leaf, which is of great cultural significance to the people of Trinidad & Tobago, especially those with Indian roots. Here, food is often served on this leaf during festivals and other special… pic.twitter.com/KX74HL44qi
— Narendra Modi (@narendramodi) July 4, 2025
ಭೋಜನಕೂಟದ ಸಮಯದಲ್ಲಿ ಸೊಹಾರಿ ಎಲೆಯಲ್ಲಿ ಬಡಿಸುವ ಆಹಾರವು ಟ್ರಿನಿಡಾಡ್ ಮತ್ತು ಟೊಬಾಗೋ ಜನರಿಗೆ ಹೆಚ್ಚಿನ ಸಾಂಸ್ಕೃತಿಕ ಮಹತ್ವದ್ದಾಗಿದೆ ಎಂದು ಪ್ರಧಾನಿ ಮೋದಿ ಗಮನಿಸಿದರು.
ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರು ಆಯೋಜಿಸಿದ್ದ ಭೋಜನಕೂಟದಲ್ಲಿ ಸೊಹರಿ ಎಲೆಯಲ್ಲಿ ಆಹಾರವನ್ನು ಬಡಿಸಲಾಗಿತ್ತು. ಇದು ಟ್ರಿನಿಡಾಡ್ ಮತ್ತು ಟೊಬಾಗೋ ಜನರಿಗೆ, ವಿಶೇಷವಾಗಿ ಭಾರತೀಯ ಬೇರುಗಳನ್ನು ಹೊಂದಿರುವವರಿಗೆ ಹೆಚ್ಚಿನ ಸಾಂಸ್ಕೃತಿಕ ಮಹತ್ವದ್ದಾಗಿದೆ. ಇಲ್ಲಿ ಹಬ್ಬಗಳು ಮತ್ತು ಇತರ ವಿಶೇಷ ಕಾರ್ಯಕ್ರಮಗಳ ಸಮಯದಲ್ಲಿ ಈ ಎಲೆಯಲ್ಲಿ ಆಹಾರವನ್ನು ಹೆಚ್ಚಾಗಿ ಬಡಿಸಲಾಗುತ್ತದೆ ಎಂದು ಪ್ರಧಾನಿ ಮೋದಿ X ನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮದುವೆ ಎಂಬ ಪವಿತ್ರ ಬಂಧಕ್ಕೆ ವಿವಾಹೇತರ ಸಂಬಂಧಗಳೇ ಬೆದರಿಕೆ: ದಾಂಪತ್ಯ ದ್ರೋಹಕ್ಕೆ ಇವುಗಳೇ ಕಾರಣ! Extramarital Affairs
ಭೋಜನದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ರಾಮ ಮಂದಿರದ ಪ್ರತಿಕೃತಿ ಮತ್ತು ಸರಯು ನದಿಯ ಪವಿತ್ರ ನೀರನ್ನು ಹಾಗೂ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದಿಂದ ಕಮಲಾ ಪ್ರಸಾದ್-ಬಿಸ್ಸೆಸ್ಸರ್‌ಗೆ ಉಡುಗೊರೆಯಾಗಿ ನೀಡಿದ್ದಾರೆ
ಭಾರತದಿಂದ ಹಲವು ವರ್ಷಗಳ ಹಿಂದೆ ಟ್ರಿನಿಡಾಡ್ ಮತ್ತು ಟೊಬೆಗೊಗೆ ಬಂದಿರುವ ಭಾರತೀಯರು ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದು, ಈ ದೇಶದ ಅಭಿವೃದ್ಧಿ ಪ್ರಯಾಣವನ್ನು ಶ್ರೀಮಂತಗೊಳಿಸುತ್ತಿದ್ದಾರೆ. ಅವರು ಭಾರತದೊಂದಿಗೆ ಸಂಪರ್ಕವನ್ನು ಉಳಿಸಿಕೊಂಡಿದ್ದು, ಭಾರತೀಯ ಸಂಸ್ಕೃತಿಯ ಬಗ್ಗೆಯೂ ಉತ್ಸುಕರಾಗಿದ್ದಾರೆ. ಪೋರ್ಟ್ ಆಫ್ ಸ್ಪೇನ್‌ನಲ್ಲಿ ಮರೆಯಲಾಗದ ಸ್ವಾಗತಕ್ಕಾಗಿ ಸ್ಥಳೀಯ ಭಾರತೀಯ ಸಮುದಾಯಕ್ಕೆ ಕೃತಜ್ಞರಾಗಿರುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
(ಏಜೆನ್ಸೀಸ್)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ರೇಸ್ನಲ್ಲಿ ಮೂವರು ಮಹಿಳೆಯರು! ಯಾರಿಗೆ ಸಿಗಲಿದೆ ಪಟ್ಟ? | BJP