More

    ಬ್ಯಾಡ್ಮಿಂಟನ್ ದಂತಕಥೆ ನಂದು ನಟೇಕರ್ ನಿಧನ.. ಪಿಎಂ ಮೋದಿ ಸಂತಾಪ

    ನವದೆಹಲಿ: ಭಾರತದ ಪ್ರಸಿದ್ಧ ಬ್ಯಾಡ್ಮಿಂಟನ್ ಕ್ರೀಡೆ ದಿಗ್ಗಜ ನಂದು ನಟೇಕರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

    ಇದನ್ನೂ ಓದಿ: ‘ವಿಶಿಂಗ್​ ಯೂ ದಿ ಬೆಸ್ಟ್​ ಮಾಮಾ …’ ಎಂದು ಅಭಿನಂದಿಸಿದ ಸುದೀಪ್​

    ತಮ್ಮ ವೃತ್ತಿಜೀವನದಲ್ಲಿ 100 ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರ್​ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದ 88 ವರ್ಷದ ನಟೇಕರ್ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರಿಗೆ ಓರ್ವ ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮನೆಯಲ್ಲಿ ನಿಧನರಾಗಿದ್ದಾರೆ ಎಂದು ಮಗ ಗೌರವ್ ಹೇಳಿದ್ದಾರೆ.

    ಅತ್ಯಂತ ಜನಪ್ರಿಯ ಕ್ರೀಡಾಪಟುಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ನಟೇಕರ್ ಅವರು ಮಾಜಿ ವಿಶ್ವ ನಂಬರ್ ಮೂರನೆಯವರಾಗಿದ್ದರು. ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಜನಿಸಿದ ನಟೇಕರ್, 15 ವರ್ಷಗಳ ವೃತ್ತಿಜೀವನದಲ್ಲಿ 100 ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರ್​​ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅವರಿಗೆ 1961 ರಲ್ಲಿ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನೂ ನೀಡಲಾಯಿತು.

    ನಟೇಕರ್ 1954 ರಲ್ಲಿ ನಡೆದ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನಲ್ಲಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಅಲ್ಲದೇ 1956 ರಲ್ಲಿ ಮಲೇಷಿಯಾದಲ್ಲಿ ಸೆಲ್ಲಂಜರ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts