More

    VIDEO| ದಲಿತ ಮತದಾರರ ಮೇಲೆ ಕಣ್ಣು ಹಾಯಿಸಿದ ಬಿಜೆಪಿ; ಪ್ರಧಾನಿ ಮೋದಿಯನ್ನು ತಬ್ಬಿ ಭಾವುಕರಾದ ಮಾದಿಗ ನಾಯಕ

    ಹೈದರಾಬಾದ್: ಮುಮದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶನಿವಾರ ತೆಲಂಗಾಣದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಆಡಳಿತರೂಡ ಬಿಆರ್​ಎಸ್​ ಹಾಗೂ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ತೆಲಂಗಾಣದಲ್ಲಿ ಮಾದಿಗ ಸಮುದಾಯದ ಜನರು ಬೃಹತ್ ಸಂಖ್ಯೆಯಲ್ಲಿದ್ದು, ಇದೀಗ ಈ ಬಾರಿಯ ಚುನಾವಣೆಯಲ್ಲಿ ಮಾದಿಗ ಸಮುದಾಯದ ಮತಬೇಟೆಗೆ ಬಿಜೆಪಿ ಜೋರಾಗೆ ತಂತ್ರ ಹೂಡಿದೆ. ಮಾದಿಗ ಸಮುದಾಯದ ಸಬಲೀಕರಣಕ್ಕೆ ಸಾಧ್ಯವಿರುವ ಎಲ್ಲ ವಿಧಾನಗಳನ್ನು ಅಳವಡಿಸಿಕೊಳ್ಳುವ ಸಮಿತಿಯನ್ನು ಕೇಂದ್ರವು ಶೀಘ್ರದಲ್ಲೇ ರಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

    ಇನ್ನು ಸಮಾವೇಶದ ವೇಳೆ ಹೃದಯಸ್ಪರ್ಶಿ ವಿಡಿಯೋ ಒಂದು ವೈರಲ್​ ಆಗಿದ್ದು, ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಮಾದಿಗ ಮೀಸಲಾತಿ ಹೋರಾಟ ಸಮಿತಿ (MRPS) ಮುಖ್ಯಸ್ಥಋಆದ ಮಂದ ಕೃಷ್ಣ ಅವರು ಸಮಾವೇಶ ನಡೆಯುವ ವೇಳೆ ಭಾವೋದ್ವೇಗಕ್ಕೆ ಒಳಗಾದರು. ಈ ವೇಳೆ ಅವರನ್ನು ಕಂಡ ಪ್ರಧಾನಿ ಮೋದಿ ಸಂತೈಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

    ಇದನ್ನೂ ಓದಿ: ಜನರ ಸಮಸ್ಯೆಗಳನ್ನು ಆಲಿಸಲು ನೀವೂ ಬನ್ನಿ ನಾನು ಬರುತ್ತೇನೆ; ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಮಾಜಿ ಸಿಎಂ ಯಡಿಯೂರಪ್ಪ ಆಹ್ವಾನ

    ಬಿಆರ್​ಎಸ್​-ಕಾಂಗ್ರೆಸ್​ ಕಮ್ಮಿ ಇಲ್ಲ

    ಇನ್ನು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್‌ಗೆ ಸಂವಿಧಾನದ ಸೃಷ್ಟಿಕರ್ತ ಡಾ. ಭೀಮರಾವ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಸಾಧ್ಯವಾಗಲಿಲ್ಲ. ಆದರೆ ಬಿಜೆಪಿ ಸರ್ಕಾರ ರಚನೆಯಾದ ನಂತರವೇ ಕೇಂದ್ರದ ಸರ್ಕಾರ ಡಾ. ಭೀಮರಾವ್ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಿತು. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಎರಡು ಬಾರಿ ಗೆಲ್ಲಲು ಕಾಂಗ್ರೆಸ್ ಬಿಡಲಿಲ್ಲ. ದಶಕಗಳ ಕಾಲ, ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಬಾಬಾಸಾಹೇಬರ ಚಿತ್ರವನ್ನು ಪ್ರದರ್ಶಿಸದಂತೆ ಕಾಂಗ್ರೆಸ್ ನೋಡಿಕೊಂಡಿತು. ಕಾಂಗ್ರೆಸ್‌ನಿಂದಾಗಿ ಬಾಬಾಸಾಹೇಬರು ದಶಕಗಳಿಂದ ಭಾರತರತ್ನವನ್ನು ಪಡೆದಿಲ್ಲ.

    ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗಾಗಿ ನಡೆಯುತ್ತಿರುವ ಆಂದೋಲನದ ಸಂದರ್ಭದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ರಾಜ್ಯ ರಚನೆಯಾದ ನಂತರ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಪ್ರತಿಯೊಬ್ಬ ದಲಿತನ ಆಕಾಂಕ್ಷೆಗಳನ್ನು ತುಳಿದು ಮುಖ್ಯಮಂತ್ರಿ ಗಾದಿಯನ್ನು ಹಿಡಿದರು. ಬಿಆರ್​ಎಸ್​ ದಲಿತ ವಿರೋಧಿಯಾಗಿದ್ದು, ಕಾಂಗ್ರೆಸ್ ಅದಕ್ಕಿಂತ ಕಡಿಮೆ ಇಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂದಬರು ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts