More

    ರಂಗೇರಿದ ಲೋಕ ಅಖಾಡ: ಪಶ್ಚಿಮ ಬಂಗಾಳಕ್ಕೆ ಮಾರ್ಚ್​ 6ಕ್ಕೆ ಮೋದಿ, ಫೆ.28 ಅಮಿತ್ ಶಾ ಭೇಟಿ!

    ನವದೆಹಲಿ: ಲೋಕಸಭಾ ಚುನಾವಣೆಗೆ ಇನ್ನೇನೂ ಕೆಲವು ದಿನಗಳು ಬಾಕಿ ಇವೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಲೋಸಕಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್​ 6 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ:IPL 2024: ಗುಜರಾತ್​​​ ಟೈಟನ್ಸ್‌ಗೆ ಶಾಕ್..ಸ್ಟಾರ್​​​​​ ಬೌಲರ್​​ ಟೂರ್ನಿಯಿಂದ ಔಟ್.?

    ಗುರುವಾರ ಈ ಕುರಿತು ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ್ ಮಂಜುದಾರ್​, ಪಶ್ಚಿಮ ಬಂಗಾಳದ ಉತ್ತರ 24 ಪಗರಣ ಜಿಲ್ಲೆಯ ಬರಾಸತ್​ನಲ್ಲಿ ನಡೆಯಲಿರುವ ಮಹಿಳಾ ರ್ಯಾಲಿಯಲ್ಲಿ ಮೋದಿ ಅವರು ಭಾಗವಹಿಸಿ ಮಹಿಳೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ.‘

    ಕೋಲ್ಕತ್ತಾದ ಸಂದೇಶ್‌ಖಾಲಿಯಲ್ಲಿ ಟಿಎಂಸಿ ಬೆಂಬಲಿಗರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಠ ಜಾತಿ ಮಹಿಳೆಯರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ ಎಂದು ಸುಕಾಂತ್ ಮಂಜುದಾರ್​ ಗುರುವಾರ ಹೇಳಿದ್ದಾರೆ. ಸಂದೇಶ್‌ಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಠ ಜಾತಿ ಮಹಿಳೆಯರನ್ನು ಪ್ರಧಾನಿ ಮೋದಿ ಭೇಟಿ ಮಾಡಲು ಬಯಸಿದರೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಹೇಳಿದರು.

    ಅಮಿತ್ ಶಾ ಅವರು ಫೆ.28ರಂದು ಭೇಟಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.28ರಂದು ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳು ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಸಂದೇಶ್‌ಖಾಲಿಯಲ್ಲಿ ಪರಿಶಿಷ್ಠ ಜಾತಿ ಮಹಿಳೆಯರ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಶಹಜಹಾನ್ ಮತ್ತು ಆತನ ಸಹಚರರು ಭೂ ಕಬಳಿಕೆ ಮತ್ತು ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.

    ಈ ಪ್ರಕರಣವನ್ನು ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮುಚ್ಚು ಹಾಕಲು ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ಅರೋಪ ಮಾಡುತ್ತಿದೆ. ಕೂಡಲೇ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

    ಬಂಗಾಳ ಸಿಎಂ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಈ ಗಲಭೆಗಳ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿದೆ.
    2024 ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಪಶ್ಚಿಮ ಬಂಗಾಳಕ್ಕೆ ಭೇಟಿ ಕುತೂಹಲ ಮೂಡಿಸಿದೆ. ಟಾರ್ಗೆಟ್​ ಲೋಕಸಭೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

    ತಮಿಳುನಾಡು ರಾಜಕಾರಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ ತ್ರಿಷಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts